ಲೋಕಸಭಾ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ನಟಿ ಕಂಗನಾ ರಣಾವತ್ ಸಖತ್ ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದ ಬಗ್ಗೆ ಹಾಗೂ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಮಾಹಿತಿಯನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಕೂಡ ಮಾಡಿಕೊಂಡಿದ್ದಾರೆ.
Advertisement
ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡಿ, ಈ ಪಟ್ಟಿಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿನ ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಕೂಡ ಆಡುತ್ತಿದ್ದಾರೆ.
Advertisement
Advertisement
ಹಲವು ತಿಂಗಳುಗಳಿಂದ ಕಂಗನಾ ರಣಾವತ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ಇತ್ತು. ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು.
Advertisement
ಇದೀಗ ಕೊನೆಗೂ ಕಂಗನಾಗೆ ಟಿಕೆಟ್ ಘೋಷಣೆ ಆಗಿದೆ. ಇಂದಿನಿಂದ ಮಂಡಿ ಕ್ಷೇತ್ರದಾದ್ಯಂತ ನಟಿ ಪ್ರವಾಸ ಮಾಡಲಿದ್ದಾರೆ. ಇಂದು ಮಂಡಿ ಕ್ಷೇತ್ರದ ಮುಖಂಡರ ಜೊತೆ ಭೇಟಿಗಳು ನಿಗದಿ ಆಗಿವೆ. ಅಧಿಕೃತವಾಗಿ ಸಕ್ರೀಯ ರಾಜಕಾರಣದಲ್ಲಿ ಕಂಗನಾ ಇರಲಿದ್ದಾರೆ.