ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕಾಂಬಿನೇಷನ್ ನ ‘ಬ್ರಹ್ಮಾಸ್ತ್ರ’ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆ ಕಳೆದ ಎರಡು ದಿನಗಳಿಂದ ಚರ್ಚೆ ಆಗುತ್ತಿದೆ. ಸಿನಿಮಾ ರಿಲೀಸ್ ಆಗಿ ಮೊದಲನೇ ದಿನವೇ ನೂರು ಕೋಟಿ ಕ್ಲಬ್ ಗೆ ಸಿನಿಮಾ ಸೇರಿತು ಎಂದು ಹೇಳಲಾಗಿತ್ತು. ಇದೀಗ ಮೂರು ದಿನಗಳ ಒಟ್ಟು ಕಲೆಕ್ಷನ್ 125 ಕೋಟಿ ಎಂದು ವರದಿಯಾಗಿದೆ. ಸಿನಿಮಾ ತಂಡವು ಅಧಿಕೃತ ಮಾಹಿತಿ ಕೊಡದೇ ಇರುವ ಕಾರಣಕ್ಕಾಗಿ ಈ ಕಲೆಕ್ಷನ್ ಸೋಮವಾರಕ್ಕೆ 200 ಕೋಟಿ ತಲುಪಿದೆ.
Advertisement
ಸಿನಿಮಾದ ನಿರ್ಮಾಪಕ ಕರಣ್ ಜೋಹಾರ್ ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ದಾಖಲೆ ರೀತಿಯಲ್ಲಿ ಆಗಿದೆ. ಮೊದಲ ದಿನವೇ ನೂರು ಕೋಟಿ ಕ್ಲಬ್‍ಗೆ ಸೇರಿದ್ದು ನಿಜ ಎಂದು ಹೇಳಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಅಲ್ಲದೇ ವೀಕೆಂಡ್ ನಲ್ಲಿ ಪ್ರೇಕ್ಷಕರು ಸಿನಿಮಾ ಒಪ್ಪಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ನೋಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಹಾಗಾಗು ಶುಕ್ರವಾರ, ಶನಿವಾರ ಮತ್ತು ಭಾನುವಾರದ ಒಟ್ಟು ಕಲೆಕ್ಷನ್ ಅಂದಾಜು 200 ಕೋಟಿ ಎಂದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು
Advertisement
Advertisement
ಇದೆಲ್ಲವನ್ನೂ ಬಾಲಿವುಡ್ ನಟಿ ಕಂಗನಾ ರಣಾವತ್ ಅಲ್ಲಗಳೆಯುತ್ತಾರೆ. ಬ್ರಹ್ಮಾಸ್ತ್ರ ಸಿನಿಮಾದ ಕಲೆಕ್ಷನ್ ಫೇಕ್, ಅದೊಂದು ಬುರುಡೆ ಪುರಾಣ ಎಂದು ಟೀಕೆ ಮಾಡಿದ್ದಾರೆ. ಸುಖಾಸುಮ್ಮನೆ ಕಲೆಕ್ಷನ್ ಬಗ್ಗೆ ಗಾಸಿಪ್ ಹಬ್ಬಿಸಲಾಗುತ್ತಿದೆ. 350 ಕೋಟಿಗೂ ಅಧಿಕ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ ಎಂದು ಕೇಳಲ್ಪಟ್ಟಿದ್ದೆ. ಈವರೆಗೂ ನೂರೇ ಕೋಟಿ ಬಂದಿದೆ ಎಂದರೂ, ಇನ್ನೂ 250 ಕೋಟಿ ಬರಬೇಕು. ಈಗಲೇ ಸಿನಿಮಾ ಗೆದ್ದಿದೆ ಅಂದು ಹೇಳುವುದಕ್ಕೆ ಆಗುವುದಿಲ್ಲ ಎಂದು ಟೀಕೆ ಮಾಡಿದ್ದಾರೆ.
Advertisement