ಮುಂಬೈ: ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದ್ದಾರೆ.
ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗುವ ನಟಿ ಕಂಗನಾ. ಸ್ವಾತಂತ್ರ್ಯದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಮಾಡಿದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುತ್ತೇನೆ ಎಂದಿದ್ದಾರೆ.
Advertisement
Advertisement
ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ ಎಂದು ಕಂಗನಾ ಗುರುವಾರ ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ನಟಿಗೆ ನೀಡಿರುವ ಪದ್ಮಶ್ರೀ ವಾಪಸ್ ಪಡೆಯಬೇಕು ಎಂದು ಹಲವರು ಒತ್ತಾಯಿಸಿದ್ದಾರೆ. ತಮ್ಮ ವಿರುದ್ಧದ ಟೀಕೆಗಳಿಗೆ ಇನ್‍ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿದ್ರೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತೆ ಅನ್ನೋ ಭಯವಿದೆ: ಸೈಫ್ ಆಲಿ ಖಾನ್
Advertisement
Advertisement
ನಡೆದಿದ್ದೇನು: ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುವ ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಪರೋಕ್ಷವಾಗಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು. ಇದನ್ನೂ ಓದಿ: ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ
ಕಂಗನಾರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು, ಇದಕ್ಕೂ ಮುನ್ನ ವರುಣ್ ಗಾಂಧಿಯಿಂದ ಹಿಡಿದು ಅನೇಕ ನಾಯಕರು ಕಂಗನಾ ರಣಾವತ್ ಅವರನ್ನು ಟೀಕಿಸಿದ್ದಾರೆ. ಇದೀಗ ಅವರು ನನ್ನ ತಪ್ಪು ಸಾಬೀತಾದರೆ ನನಗೆ ಕೊಟ್ಟಿರುವ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ ಎಂದು ಹೇಳಿದ್ದಾರೆ.