ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾದ ನಟಿ ಕಾಸಮ್ಮಲ್ ಮಗನಿಂದ್ಲೇ ಬರ್ಬರ ಹತ್ಯೆ

Public TV
1 Min Read
KASAMMAL

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ‘ಕಡೈಸಿ ವಿವಸಾಯಿ’ ಚಿತ್ರದಲ್ಲಿ ನಟಿಸಿದ್ದ ಕಾಸಮ್ಮಲ್ (71) (Kasammal) ಅವರು ತಮ್ಮ ಸ್ವಂತ ಮಗನಿಂದಲೇ ಹತ್ಯೆಯಾಗಿದ್ದಾರೆ.

ಪ್ರಕರಣ ಸಂಬಂಧ ಪುತ್ರ ಪಿ.ನಾಮಕೋಡಿ(52)ಯನ್ನು ತಮಿಳುನಾಡು (Tamilnadu) ಪೊಲೀಸರು ಬಂಧಿಸಿದ್ದಾರೆ. ಮಧುರೈ (Madhurai) ಜಿಲ್ಲೆಯ ಉಸಿಲಂಪಟ್ಟಿ ಸಮೀಪದ ಅನೈಯೂರಿನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಮಕ್ಕಳ ಕಳ್ಳರ ಆತಂಕ – 2ನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ

ಮದ್ಯ ಖರೀದಿಸಲು ಹಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ಗಲಾಟೆ ತಾರಕಕ್ಕೇರಿ ಮಗ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ಕಾಸಮ್ಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ಸೇತುಪತಿ (Vijay Sethupathi) ಮತ್ತು 85 ವರ್ಷದ ನಲ್ಲಂದಿ ಅವರು ‘ಕಡೈಸಿ ವಿವಸಾಯಿ’ (ಕೊನೆಯ ರೈತ) ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವು ಅನೇಕ ಹಳ್ಳಿಗರನ್ನು ಒಳಗೊಂಡಿತ್ತು. ಈ ಚಿತ್ರದಲ್ಲಿ ವಿಜಯ್‌ ಸೇತುಪತಿ ಅವರ ಚಿಕ್ಕಮ್ಮನ ಪಾತ್ರದಲ್ಲಿ ಕಾಸಮ್ಮಲ್‌ ಅಭಿನಯಿಸಿದ್ದರು.

ಕಾಸಮ್ಮಲ್ ಮತ್ತು ಆಕೆಯ ಪತಿ ಬಾಲಸಾಮಿ ಅವರಿಗೆ ನಾಮಕೋಡಿ ಸೇರಿದಂತೆ ಮೂವರು ಮಕ್ಕಳಿದ್ದಾರೆ. ಪತ್ನಿಯ ಜೊತೆ ಜಗಳವಾಡಿದ್ದ ನಾಮಕೋಡಿಯು ತಂದೆ-ತಾಯಿಯೊಂದಿಗೆ ವಾಸವಾಗಿದ್ದನು.

Share This Article