ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್ (Kirti Suresh), ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳು ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು (Gold Coin) ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ ಅವರು ಈ ಉಡುಗೊರೆಯನ್ನು ನೀಡಿರುವುದಾಗಿ ಹೇಳಿಕೊಂಡಿದ್ದಾರೆ.
ಮಹಾನಟಿ ಸಿನಿಮಾ ಮೂಲಕ ಚಿತ್ರ ಜಗತ್ತಿಗೆ ಪರಿಚಯವಾದ ಕೀರ್ತಿ ಸುರೇಶ್, ಮೂಲತಃ ಮಲಯಾಳಂ ಚಿತ್ರರಂಗದವರಾದರೂ, ಸಾಕಷ್ಟು ಹೆಸರು ಮಾಡಿದ್ದು ತೆಲುಗು ಮತ್ತು ತಮಿಳಿನಲ್ಲಿ. ಇದೀಗ ಅವರ ನಟನೆಯ ತೆಲುಗಿನ ದಸರಾ (Dasara) ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ನಾನಿ (Nani) ಜೊತೆ ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿರುವ ಅವರು, ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗೂ ಮುಂದಾಗಿದ್ದಾರೆ. ಈ ಸಮಯದಲ್ಲಿ ಉಡುಗೊರೆ ನೀಡಿ ಸಖತ್ ಸುದ್ದಿ ಆಗಿದ್ದಾರೆ.
ದಸರಾ ಸಿನಿಮಾದಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ 130 ಜನರಿಗೆ ತಲಾ ಹತ್ತು ಗ್ರಾಂ ಚಿನ್ನದ ನಾಣ್ಯಗಳನ್ನು ಕೊಡುವ ಮೂಲಕ ಯುಗಾದಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ ಕೀರ್ತಿ ಸುರೇಶ್. ಸಿನಿಮಾದ ಕೊನೆಯ ದಿನದ ಶೂಟಿಂಗ್ ನಲ್ಲಿ ಸೆಟ್ ನಲ್ಲಿದ್ದ ಬಹುತೇಕರು ಭಾವುಕರಾಗಿದ್ದರಂತೆ. ಅಷ್ಟೊಂದು ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ಈ ಕಾರಣಕ್ಕಾಗಿ ಎಲ್ಲರಿಗೂ ಚಿನ್ನದ ಉಡುಗೊರೆ ಸಿಕ್ಕಿದೆ.