ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾಣಿ (Kiara Advani) ವೆಕೇಷನ್ ಮೂಡ್‌ನಲ್ಲಿದ್ದಾರೆ. ಪತಿ ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಜೊತೆ ಗರ್ಭಿಣಿ ಕಿಯಾರಾ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಪ್ರವಾಸದ ಸುಂದರ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬೇಬಿ ಬಂಪ್ ಮರೆ ಮಾಚಿ ವೆಕೇಷನ್ ಸುಂದರ ಫೋಟೋಗಳನ್ನು ಕಿಯಾರಾ ಹಂಚಿಕೊಂಡಿದ್ದಾರೆ. ನಟಿಯ ಮುಖದಲ್ಲಿ ಪ್ರೆಗ್ನೆನ್ಸಿ ಕಳೆ ಎದ್ದು ಕಾಣುತ್ತಿದೆ. ಪತಿಯೊಂದಿಗೆ ನಟಿ ಖುಷಿಯಲ್ಲಿರೋದನ್ನು ನೋಡಬಹುದಾಗಿದೆ. ಇದನ್ನೂ ಓದಿ:ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು
ಫೆ.28ರಂದು ಕಿಯಾರಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿರೋದಾಗಿ ಅಧಿಕೃತವಾಗಿ ಘೋಷಿಸಿದ್ದರು. ಈ ದಂಪತಿಗೆ ಸಮಂತಾ, ರಶ್ಮಿಕಾ, ಆಲಿಯಾ ಭಟ್, ಜಾಕ್ವೆಲಿನ್ ಸೇರಿದಂತೆ ಅನೇಕರು ಶುಭಕೋರಿದ್ದರು. ಇದನ್ನೂ ಓದಿ:ಮದುವೆ ಬಳಿಕ ಮೊದಲ ಬಾರಿಗೆ ಪತಿಯೊಂದಿಗಿನ ಫೋಟೋ ಹಂಚಿಕೊಂಡ ಗಾಯಕಿ ಪೃಥ್ವಿ ಭಟ್
ಪ್ರೆಗ್ನೆಂಟ್ ಆಗಿರೋ ಹಿನ್ನೆಲೆ ಇತ್ತೀಚೆಗೆ ರಣವೀರ್ ಸಿಂಗ್ ನಟನೆಯ ‘ಡಾನ್ 3’ ಚಿತ್ರದಿಂದ ಕಿಯಾರಾ ಹೊರಬಂದಿದ್ದಾರೆ. ಕೆಲವು ಪ್ರಾಜೆಕ್ಟ್‌ಗಳನ್ನು ಅವರು ಕೈಬಿಟ್ಟಿದ್ದಾರೆ.
2023ರ ಫೆ.7ರಂದು ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಕಿಯಾರಾ ಅಡ್ವಾಣಿ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು.