ಯಶ್ (Yash) ನಾಯಕಿ, ಗೂಗ್ಲಿ ಬೆಡಗಿ ಕೃತಿ ಕರಬಂಧ (Kriti Kharbanda) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೇ ಮಾರ್ಚ್ 15ಕ್ಕೆ ದೆಹಲಿಯಲ್ಲಿ ಅದ್ಧೂರಿಯಾಗಿ ಪುಲ್ಕಿತ್ ಸಾಮ್ರಾಟ್ (Pulkit Samrat) ಜೊತೆ ಮದುವೆಯಾಗುತ್ತಿದ್ದಾರೆ. ಹಾಗಾದ್ರೆ ಯಾರಿಗೆಲ್ಲಾ ಕೃತಿಯ ಮದುವೆಗೆ ಆಹ್ವಾನವಿದೆ. ಯಾರೆಲ್ಲಾ ‘ಗೂಗ್ಲಿ’ (Googly) ನಟಿಯ ಮದುವೆಗೆ ಹಾಜರಿ ಹಾಕಲಿದ್ದಾರೆ.
ಹಲವು ವರ್ಷಗಳ ಪ್ರೀತಿಗೆ ಮದುವೆಯ (Wedding) ಮುದ್ರೆ ಒತ್ತಲು ನಟಿ ಸಜ್ಜಾಗಿದ್ದಾರೆ. ಇನ್ನೂ ಬಾಲಿವುಡ್ ಸ್ಟಾರ್ಗಳಾದ ರಿಚಾ ಚಡ್ಡಾ, ಅಲಿ ಫಜಲ್, ಫರ್ಹಾನ್ ಅಖ್ತರ್, ಶಿಬಾನಿ ದಾಂಡೇಕರ್, ಜೋಯಾ ಅಕ್ತರ್, ರಿತೇಶ್ ಸಿದ್ವಾನಿ, ಲವ್ ರಂಜನ್ ಸೇರಿದಂತೆ ಆಪ್ತರನ್ನು ಕೃತಿ-ಪುಲ್ಕಿತ್ ಜೋಡಿ ಮದುವೆಗೆ ಆಮಂತ್ರಣ ನೀಡಿದ್ದಾರೆ. ಇದನ್ನೂ ಓದಿ:‘ಕಾಂತಾರ’ ಪ್ರೀಕ್ವೇಲ್ನಲ್ಲಿ ರಿಷಬ್ ಶೆಟ್ಟಿ ಜೊತೆ ಜ್ಯೂ.ಎನ್ಟಿಆರ್
ಮಾರ್ಚ್ 13ರಂದು ಮೆಹಂದಿ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 14ರಂದು ಹಳದಿ ಶಾಸ್ತ್ರ ಮತ್ತು ಕಾಕ್ಟೈಲ್ ಪಾರ್ಟಿ ಆಯೋಜನೆ ಮಾಡಲಾಗಿದೆ. ಮಾರ್ಚ್ 15ರಂದು ಕೃತಿ-ಪುಲ್ಕಿತ್ ಮದುವೆ ನಡೆಯಲಿದೆ. ಈಗ ಈ ಜೋಡಿ ಮದುವೆ ಆಗುತ್ತಿರುವ ಸ್ಥಳದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಸುಮಾರು 300 ಎಕರೆಯಲ್ಲಿ ನಿರ್ಮಾಣಗೊಂಡಿರುವ ರೆಸಾರ್ಟ್ನಲ್ಲಿ ಈ ಜೋಡಿ ಹಸಮಣೆ ತುಳಿಯಲಿದ್ದಾರೆ.
ಕೃತಿ ಕರಬಂಧ ಹಾಗೂ ಪುಲ್ಕಿತ್ ಸಮರ್ಥ್ ದೆಹಲಿಯಲ್ಲಿರುವ ಐಟಿಸಿ ಗ್ರ್ಯಾಂಡ್ ಐಷಾರಾಮಿ ರೆಸಾರ್ಟ್ನಲ್ಲಿ ಮದುವೆ ಆಗುತ್ತಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ಈ ರೆಸಾರ್ಟ್ 300 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿದೆ. ಈ ಭವ್ಯವಾದ ರೆಸಾರ್ಟ್ ಅರಮನೆಯ ವಾಸ್ತುಶಿಲ್ಪವನ್ನು ಹೊಂದಿದೆ. ಪ್ರಾಚೀನ ಶೈಲಿಯಲ್ಲಿ ಸುಂದರವಾದ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ.
ಗ್ರ್ಯಾಂಡ್ ಭಾರತ್ ರೆಸಾರ್ಟ್ನಲ್ಲಿ ಸುಮಾರು 4 ಪ್ರೆಸಿಡೆಂನ್ಸಿಯಲ್ ವಿಲ್ಲಾವಿದೆ. ಐಷಾರಾಮಿ ಸ್ಪಾಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ. ಇನ್ನೂ ಕೃತಿ, ಪುಲ್ಕಿತ್ ಇಬ್ಬರೂ ದೆಹಲಿಯಲ್ಲೇ ಹುಟ್ಟಿ ಬೆಳೆದಿದ್ದಾರೆ. ಇವರ ಕುಟುಂಬ ದೆಹಲಿಯಲ್ಲಿಯೇ ನೆಲೆಸಿರುವುದರಿಂದ ಇದೇ ಸೂಕ್ತ ಆಯ್ಕೆ ಎಂದು ಜೋಡಿ ನಿರ್ಧರಿಸಿದೆ.