ಮುಂಬೈ: ಬಾಲಿವುಡ್ ನಟಿ ಕೃತಿ ಸನೋನ್ ಅವರು ಟಾಪ್ ನಟಿಯಲ್ಲಿ ಒಬ್ಬರಾಗಿದ್ದಾರೆ. ಪರಮ ಸುಂದರಿ ಹಾಡಿನ ಮೂಲಕವಾಗಿ ಸುದ್ದಿಯಲ್ಲಿರುವ ಇವರು ಇದೀಗ ಸಂಭಾವನೆ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ.
Advertisement
ಈ ವರ್ಷ ನೆಟ್ಫ್ಲಿಕ್ಸ್ನಲ್ಲಿ ತೆರೆಕಂಡ ಮಿಮಿ ಸಿನಿಮಾ ಸೂಪರ್ ಹಿಟ್ ಆಗಿದೆ. ಪ್ರೇಕ್ಷಕರು ಮತ್ತು ವಿಮರ್ಶಕರು ಈ ಚಿತ್ರವನ್ನು ಹಾಡಿ ಹೊಗಳುತ್ತಿದ್ದಾರೆ. ಇಷ್ಟೆಲ್ಲ ಯಶಸ್ಸು ಗಳಿಸಿರುವ ಕೃತಿಗೆ ಬಾಲಿವುಡ್‍ನಲ್ಲಿ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಮೂಲಗಳ ಪ್ರಕಾರ ಅವರು ಪ್ರತಿ ಸಿನಿಮಾಗೆ ಬರೋಬ್ಬರಿ 2 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಅವರ ಒಟ್ಟು ಆಸ್ತಿ ಮೌಲ್ಯ 37 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
Advertisement
View this post on Instagram
Advertisement
ಸಿನಿಮಾ ನಟಿಯಾಗುವುದಕ್ಕೂ ಮುನ್ನ ಕೃತಿ ಮಾಡೆಲಿಂಗ್ ಮಾಡುತ್ತಿದ್ದರು. 2014ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಕೃತಿ ಸನೋನ್. ಅನೇಕ ಪ್ರತಿಷ್ಠಿತ ಬ್ರ್ಯಾಂಡ್‍ಗಳ ಜಾಹೀರಾತಿನಲ್ಲಿ ಅವರು ನಟಿಸಿದ್ದಾರೆ. ಈಗಲೂ ಅವರು ಹಲವು ಕಂಪನಿಗಳಿಗೆ ರಾಯಭಾರಿ ಆಗಿದ್ದಾರೆ. ಅದರಿಂದಲೂ ಅವರಿಗೆ ಒಳ್ಳೆಯ ಸಂಭಾವನೆ ಸಿಗುತ್ತಿದೆ. ಅವರು ಸ್ವಂತ ಬಟ್ಟೆ ಬ್ರ್ಯಾಂಡ್ ಕೂಡ ಹೊಂದಿದ್ದಾರೆ. ಇದನ್ನೂ ಓದಿ: ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್
Advertisement
ಈಗ ಎಲ್ಲೆಲ್ಲೂ ಪರಮ ಸುಂದರಿ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೃತಿ ಸನೋನ್ ಮುಖ್ಯಭೂಮಿಕೆ ನಿಭಾಯಿಸಿರುವ ಮಿಮಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಎತ್ತ ಕಣ್ಣು ಹಾಯಿಸಿದರೂ ಪರಮ ಸುಂದರಿ ಹಾಡಿನ ತುಣುಕುಗಳೇ ರಾರಾಜಿಸುತ್ತಿವೆ. ಹುಡುಗಿಯರು ಈ ಹಾಡಿಗೆ ಫಿದಾ ಆಗಿದ್ದಾರೆ. ಇದರಿಂದಾಗಿ ನಟಿ ಕೃತಿ ಸನೋನ್ ಖ್ಯಾತಿ ಸಿಕ್ಕಾಪಟ್ಟೆ ಹೆಚ್ಚಾಗಿದೆ.