ಚಿಕ್ಕಬಳ್ಳಾಪುರ: ಶಾಸಕ ಕೆ.ಸುಧಾಕರ್ ಓಡೆತನದ ಶ್ರೀ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಬಹುಭಾಷಾ ತಾರೆ ಖ್ಯಾತ ನಟಿ ಖುಷ್ಬು ಉದ್ಘಾಟಿಸಿದ್ದಾರೆ.
ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದ ನಟಿ ಖುಷ್ಬು ನಗರದ 5 ವಾರ್ಡ್‍ಗಳಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದರು.
ಶಾಸಕ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರ 20 ವಾರ್ಡ್ ಗಳಲ್ಲಿ ಅಮೃತ ಗಂಗೆ ಎನ್ನುವ ಹೆಸರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ.