ನಟ ರಮೇಶ್ ಅರವಿಂದ್ (Ramesh Aravind) ಅಭಿನಯದ 106ನೇ ಚಿತ್ರ ದೈಜಿ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ರಾಧಿಕಾ ನಾರಾಯಣ್, ಅವಿನಾಶ್, ದಿಗಂತ್, ಗುರು ದೇಶಪಾಂಡೆ ಮುಂತಾದವರ ಅಭಿನಯವಿರುವ ಈ ಚಿತ್ರದಲ್ಲಿ ದಿಯಾ ಖ್ಯಾತಿಯ ಖುಷಿ ರವಿ (Kushi Ravi) ಕೂಡ ಅಭಿನಯಿಸಿದ್ದಾರೆ. Spiritual base ಆಧ್ಯಾತ್ಮಿಕ ಹಿನ್ನೆಲೆಯ ವಿಶೇಷ ಪಾತ್ರದಲ್ಲಿ ಖುಷಿ ಅವರು ನಟಿಸಿದ್ದಾರೆ.
ವಿಬಾ ಕಶ್ಯಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿರುವ ಹಾಗೂ ಶಿವಾಜಿ ಸುರತ್ಕಲ್ ಖ್ಯಾತಿಯ ಆಕಾಶ್ ಶ್ರೀವತ್ಸ ನಿರ್ದೇಶನದ ಈ ಚಿತ್ರಕ್ಕೆ ಒಂದು ದಿನದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಉಳಿದ ಚಿತ್ರೀಕರಣ ಪೂರ್ಣವಾಗಿದೆ. ವಿ.ಎಫ್.ಎಕ್ಸ್ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಆ ಕೆಲಸದ ಮೇಲೆ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಲಿದೆ. ಇದನ್ನೂ ಓದಿ: ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
ಜ್ಯೂಡಾ ಸ್ಯಾಂಡಿ, ನಕುಲ್ ಅಭಯಂಕರ್ ಹಾಗೂ ಸಚಿನ್ ಬಸ್ರೂರ್ ಮೂರು ಜನ ಸಂಗೀತ ನಿರ್ದೇಶಕರ ಸಂಗೀತ ಸಂಯೋಜನೆಯಿರುವ ಈ ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣ ದೈಜಿ ಚಿತ್ರಕ್ಕಿದೆ. ಇದನ್ನೂ ಓದಿ: ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್


