ನೆಲಮಂಗಲ: ಗಡಿ ಭಾಗದ ಹಳ್ಳಿಗಳಿಗೆ ಮೂಲ ಸೌಕರ್ಯದ ಕೊರತೆ ಎಂದು ಮೂಗು ಮುರಿಯುವ ಕಾಲದಲ್ಲಿ ತಮ್ಮ ಸ್ವಂತ ಜಮೀನು ಮಾರಿ, ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಎಂ.ಲೀಲಾವತಿ ಮುಂದಾಗಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಸುಮಾರು 10 ವರ್ಷಗಳ ಹಿಂದೆ ಸಣ್ಣದೊಂದು ಆಸ್ಪತ್ರೆ ನಿರ್ಮಾಣ ಮಾಡಿದ್ದ ಡಾ.ಎಂ.ಲೀಲಾವತಿಯವರು, ಇಂದು ಮತ್ತೊಂದು ಪ್ರಾಥಮಿಕ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.ಇದನ್ನೂ ಓದಿ: ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್
Advertisement
Advertisement
ತಾಯಿ ಲೀಲಾವತಿ ಅಮ್ಮನವರ ಆಸೆಯಂತೆ ಚೆನ್ನೈ ನಲ್ಲಿರುವ ತಮ್ಮ ಸ್ವಂತ ಜಮೀನನ್ನು ಮಾರಿದ ನಟ ವಿನೋದ್ ರಾಜ್ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಡಾ.ಲೀಲಾವತಿಯವರ ಆರೋಗ್ಯ ಕ್ಷೀಣವಾಗಿದ್ದು, ಅವರ ಅನುಪಸ್ಥಿತಿಯಲ್ಲಿ, ಮಗ ನಟ ವಿನೋದ್ ರಾಜ್ ಚಾಲನೆ ನೀಡಿದರು. ಇದನ್ನೂ ಓದಿ: ಗೆಳೆಯನ ಜೊತೆಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ತೇಜಸ್ವಿನಿ ಪ್ರಕಾಶ್
Advertisement
Advertisement
ಭೂಮಿ ಪೂಜೆಗೆ ನೆಲಮಂಗಲ ಶಾಸಕ ಡಾ.ಕೆ.ಶ್ರೀನಿವಾಸ ಮೂರ್ತಿ ಕೂಡ ಭಾಗಿಯಾಗಿ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹಾಗೂ ಅವರ ಹೆಸರಿನ ಆಸ್ಪತ್ರೆಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನ ಒದಗಿಸುವ ಭರವಸೆ ನೀಡಿದರು. ಈ ವೇಳೆ ಟಿಎಚ್ಓ ಡಾ. ಹರೀಶ್, ಡಾ.ಮಂಜುಳ, ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ಕೃಷ್ಣಪ್ಪ, ಸದಸ್ಯ ಶ್ರೀನಿವಾಸ್, ರಾಮಕೃಷ್ಣಪ್ಪ, ಸಂತೋಷ ನಾಯಕ, ಗೋಪಾಲ್, ವೆಂಕಟೇಶ್ ಗ್ರಾಮದ ಜನರು ಉಪಸ್ಥಿತರಿದ್ದರು.