ರಾಜ್ಯದಲ್ಲಿ ವರುಣ ಕೃಪೆಯಿಲ್ಲದೆ ಕಾವೇರಿ ನೀರಿನ ಪ್ರಮಾಣ ಇಳಿಕೆಯಾಗಿದೆ ಈ ನಡುವೆ ತಮಿಳುನಾಡಿಗೆ ನೀರನ್ನು ಹರಿಯಲು ಬಿಟ್ಟಿದ್ದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ವಿವಿಧ ರೈತ ಹಾಗೂ ಸಂಘಟನೆಗಳು ಹೋರಾಟ ನಡೆಸುತಿದ್ದು, ಕಾವೇರಿ ಹೋರಾಟಕ್ಕೆ (Cauvery protest) ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಹಿರಿಯ ನಟಿ ಎಂ.ಲೀಲಾವತಿ (Leelavati) ಇಳಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಮನೆಯಲ್ಲಿ ಮಾತನಾಡಿದ ಅವರು, ಕಾವೇರಿ ನಮ್ಮದು ಎಂದು ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ನಾನು ಸಹ ಕಾವೇರಿ ಹೋರಾಟಕ್ಕೆ ಹೊರಡುವೆ ನಮ್ಮ ಜಲ, ನಮ್ಮ ನೆಲ, ನಮ್ಮ ನುಡಿ, ಎಲ್ಲಾ ಕನ್ನಡಕೊಸ್ಕರ. ಕಾವೇರಿ ನೀರಿಗಾಗಿ ನಾನು ಹೋರಾಟಕ್ಕೆ ಬರುವೆ’ ಎಂದಿದ್ದಾರೆ. ನೆಲಮಂಗಲದ ಮನೆಯಿಂದ ಮಂಡ್ಯ ಪ್ರತಿಭಟನೆ ಸ್ಥಳಕ್ಕೆ ಮಗ ವಿನೋದ್ ರಾಜ್ (Vinod Raj)ಜೊತೆಗೆ ಹೊರಟಿದ್ದಾರೆ.
ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ಹೊಸ ಸಿನಿಮಾಗೆ ಇಂದು ಮುಹೂರ್ತ
ಕಲಾವಿದ ಅನ್ನೋದನ್ನ ಬಿಟ್ಟು, ಕನ್ನಡಿಗನಾಗಿ ರೈತನ ಮಗನಾಗಿ ಮಾತನಾಡುತ್ತೇನೆ. ನಮ್ಮ ಕಲಾವಿದರ ಸಂಘದಿAದ ಅನಂತ್‌ನಾಗ್, ರವಿಚಂದ್ರನ್, ಜಗ್ಗೇಶ್, ಶಿವಣ್ಣ ಅವರು ಒಂದು ನಿರ್ಧಾರ ಕೈಗೊಂಡು ಕಾವೇರಿ ಹೋರಾಟಕ್ಕೆ ಕರೆ ನೀಡಿದರೆ, ಅವರ ಮಾರ್ಗದರ್ಶನದಲ್ಲಿ ನಾವು ನಡೆಯುತ್ತೇವೆ.
ಕಾವೇರಿ ಸಮಸ್ಯೆ ಇವಾಗಿನಿಂದ ಇರೋದಲ್ಲ, ಸುಮಾರು ವರ್ಷಗಳಿಂದ ಇದೆ. ಚಿತ್ರರಂಗದ ಹಿರಿಯ ನಟರಿದ್ದಾರೆ. ಅವರು ನಿರ್ಧರಿಸಲಿ ನಾವು ಜೊತೆಗೆ ಇರುತ್ತೇವೆ ಎಂದು ಧ್ರುವ ಮಾತನಾಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಕೂಡ ಸದಾ ಇದೆ ಎಂದು ನಟ ಸಹಮತ ಸೂಚಿಸಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]