ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ನಾಳೆ ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Sivakumar) ಅವರು ಪಶು ಆಸ್ಪತ್ರೆಯನ್ನು (Hospital) ಉದ್ಘಾಟಿಸಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ.
Advertisement
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಪ್ರಕಟಿಸಿದೆ.
Advertisement
Advertisement
ಲೀಲಾವತಿ ಅವರ ಆರೋಗ್ಯಕ್ಕಾಗಿ ಸರ್ಜಾ ಪ್ರಾರ್ಥನೆ
Advertisement
ಹಿರಿಯ ನಟಿ ಲೀಲಾವತಿ (Leelavati) ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಖ್ಯಾತ ನಟ ಅರ್ಜುನ್ ಸರ್ಜಾ (Arjun Sarja). ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬಂದಿದ್ದ ಅರ್ಜುನ್ ಸರ್ಜಾ, ಕೆಲಹೊತ್ತು ಲೀಲಾವತಿ ಅವರ ಮನೆಯಲ್ಲಿ ಇದ್ದು, ಆರೋಗ್ಯ ವಿಚಾರಿಸಿದ್ದಾರೆ.
ವಯಸ್ಸಿನ ಕಾರಣದಿಂದಾಗಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಇದೀಗ ಅರ್ಜುನ್ ಸರ್ಜಾ ಕೂಡ ಅದೇ ಕೆಲಸ ಮಾಡಿದ್ದಾರೆ. 87 ವರ್ಷದ ಹಿರಿಯ ನಟಿ ಲೀಲಾವತಿಯವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ.
ತಾಯಿಯ ಆರೋಗ್ಯ ವಿಚಾರಿಸುವಾಗ ಲೀಲಾವತಿ ಪುತ್ರ ವಿನೋದ್ ರಾಜ್(Vinod Raj)ಕಣ್ಣೀರಿಟ್ಟಿದ್ದಾರೆ. ಆನಂತರ ಲೀಲಾವತಿಯವರು ಬೇಗ ಆರೋಗ್ಯ ಸುಧಾರಿಸಲು ಭಗವಂತ ಹನುಮಂತನಲ್ಲಿ ಪ್ರಾರ್ಥಿಸುವುದಾಗಿ ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ. ದೊಡ್ಡ ಹನುಮಂತನ ದೇವಾಲಯ ಕಟ್ಟಿಸಿದ್ದು ಅಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದರು ಅರ್ಜುನ್ ಸರ್ಜಾ.