ತನ್ನ ಗಂಡನಿಗೆ ಜೈಲಿನಲ್ಲಿ ವಿಐಪಿ ಸೆಲ್ ನೀಡುವಂತೆ ನಟಿ ಮಹಾಲಕ್ಷ್ಮಿ ಕೋರ್ಟಿಗೆ ಮನವಿ ಮಾಡಿದ್ದರು. ತನ್ನ ಪತಿಯು ಸಿಲೆಬ್ರಿಟಿ ಆಗಿರುವುದರಿಂದ ಅವರಿಗೆ ಎ ಕ್ಲಾಸ್ ಸೆಲ್ ನೀಡಬೇಕು ಎಂದು ಮಹಾಲಕ್ಷ್ಮಿ ಎಗ್ಮೋರ್ ನ್ಯಾಯಾಲಕ್ಕೆ ಮನವಿ ಮಾಡಿಕೊಂಡಿದ್ದರು. ಜೊತೆಗೆ ಜಾಮೀನು (Bail) ಕೂಡ ಕೋರಿ ಅರ್ಜಿ ಸಲ್ಲಿಸಿದ್ದರು. ಎರಡೂ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.
Advertisement
ಜೈಲಿನಲ್ಲಿ ಪತಿಯನ್ನು ನೋಡಿ ಕಣ್ಣೀರು ಹಾಕಿರುವ ಮಹಾಲಕ್ಷ್ಮಿ, ಶತಾಯಗತಾಯ ಅವರನ್ನು ಬಂಧನದಿಂದ ಬಿಡಿಸಿಕೊಳ್ಳುವುದಕ್ಕಾಗಿ ಸಾಕಷ್ಟು ಕಾನೂನು ಹೋರಾಟ ಮಾಡುತ್ತಿದ್ದಾರೆ. ತನ್ನ ಪತಿಯಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ವಾದ ಮಾಡುತ್ತಿದ್ದಾರೆ. ಸದ್ಯ ಜಾಮೀನು ಸಿಗದೇ ಇರುವ ಕಾರಣದಿಂದಾಗಿ ಪತಿ ರವೀಂದರ್ ಇನ್ನಷ್ಟು ದಿನ ಜೈಲಿನಲ್ಲಿ(Jail) ಇರಬೇಕಾಗಿದೆ.
Advertisement
Advertisement
ಏನಿದು ಪ್ರಕರಣ?
Advertisement
ಕಿರುತೆರೆ ನಟಿ ಮಹಾಲಕ್ಷ್ಮಿ (Mahalakshmi) ಪತಿ ರವೀಂದ್ರ ಚಂದ್ರಶೇಖರ್ (Ravindra Chandrashekar) ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ‘ಸೀತಾರಾಮಂ’ ಬೆಡಗಿ
ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‍ನ ಬಾಲಾಜಿ ಕಾಪಾ ಎಂಬ ಉದ್ಯಮಿಗೆ ನಿರ್ಮಾಪಕ ರವೀಂದ್ರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ತಮ್ಮ ಲಿಬ್ರಾ ಪ್ರೊಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಅವರನ್ನು ಕೇಳಿದ್ದರು. ಅದರಂತೆ ಉದ್ಯಮಿ ಬಾಲಾಜಿ ಅವರು ರವೀಂದ್ರಗೆ 2020ರ ಸೆಪ್ಟೆಂಬರ್‌ನಲ್ಲಿ 16 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು. ಉದ್ಯಮಿ ಬಳಿ ಹಣ ಪಡೆದು ಯೋಜನೆಗೆ ಚಾಲನೆ ನೀಡಿಲ್ಲ. ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ತಮಿಳುನಾಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.
ಅವರ ದೂರಿನ ಮೇಲೆ ತನಿಖೆ ನಡೆಸಲಾಗಿದ್ದು, ರವೀಂದ್ರ ಅವರು ದಾಖಲೆಗಳನ್ನು ನಕಲು ಮಾಡಿದ್ದು ಬೆಳಕಿಗೆ ಬಂದಿದೆ. ಈ ಸಂಬಂಧ ರವೀಂದ್ರ ಚಂದ್ರಶೇಖರ್ ಅವರನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಅವರ ಮೇಲೆ ಹಲವು ವಂಚನೆ ಪ್ರಕರಣಗಳು ದಾಖಲಾಗಿದೆ.
Web Stories