ಬಾಯ್‌ಫ್ರೆಂಡ್ ಖಾಸಗಿ ಫೋಟೋ ಶೇರ್ ಮಾಡಿದ ಮಲೈಕಾ- ಅರ್ಜುನ್ ಕಪೂರ್ ಟ್ರೋಲ್

Public TV
1 Min Read
malaika

ಬಾಲಿವುಡ್ (Bollywood) ನಟಿ ಮಲೈಕಾ ಅರೋರಾ (Malaika Arora) ವಯಸ್ಸು 50ರ ಆಸು ಪಾಸಿನಲ್ಲಿದ್ರೂ ಕೂಡ ಅವರ ಬ್ಯೂಟಿ ಕೊಂಚವೂ ಮಾಸಿಲ್ಲ. ಆಗಾಗ ಗ್ಲ್ಯಾಮರಸ್ ಫೋಟೋ ಹಂಚಿಕೊಳ್ಳುವ ಮೂಲಕ ನಟಿ ಸದ್ದು ಮಾಡ್ತಿರುತ್ತಾರೆ. ಇದೀಗ ಗೆಳೆಯ ಅರ್ಜುನ್ ಕಪೂರ್ ಅವರ ಖಾಸಗಿ ಫೋಟೋವನ್ನ ನಟಿ ಶೇರ್ ಮಾಡಿದ್ದಾರೆ. ಈ ಫೋಟೋ ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ.

malaika arora

ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುವ ಜೋಡಿ ಅಂದರೆ ಅರ್ಜುನ್- ಮಲೈಕಾ ಅರೋರಾ. ಸಿನಿಮಾಗಿಂತ ಖಾಸಗಿ ವಿಚಾರವಾಗಿಯೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಮಲೈಕಾ ಮಾಡಿದ ಒಂದು ಕೆಲಸದಿಂದ ಅರ್ಜುನ್ ಕಪೂರ್ (Arjun Kapoor) ಸಖತ್ ಟ್ರೋಲ್ (Troll) ಆಗುತ್ತಿದ್ದಾರೆ. ಇದನ್ನೂ ಓದಿ: ಅಂಬಿ ಹಾಡಿಗೆ ಅಭಿ-ಅವಿವಾ ಡಾನ್ಸ್ : ಭಾವಿ ಪತ್ನಿಗೆ ಚಳಿ ಚಳಿ ತಾಳೆನು ಎಂದ ಯಂಗ್ ರೆಬೆಲ್ ಸ್ಟಾರ್

Malaika Arora 3

ಮಲೈಕಾ- ಅರ್ಜುನ್ ಕಪೂರ್ ರಿಲೇಷನ್‌ಶಿಪ್ ಇದೀಗ ಗುಟ್ಟಾಗಿ ಏನು ಉಳಿದಿಲ್ಲ. ಅರ್ಬಾಜ್ ಖಾನ್ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಮಲೈಕಾ, ಅರ್ಜುನ್ ಕಪೂರ್ ಜೊತೆ ಡೇಟ್ ಮಾಡುತ್ತಿದ್ದಾರೆ. ಲಿವಿಂಗ್ ರಿಲೇಷನ್‌ಶಿಪ್ನಲ್ಲೂ ಇದ್ದಾರೆ. ಆಗಾಗ ಇಬ್ಬರೂ ವಿದೇಶಕ್ಕೆ ಹೋಗಿ ಬರುತ್ತಾರೆ. ಅಷ್ಟರ ಮಟ್ಟಿಗೆ ಇಬ್ಬರ ಬಂಧ ಗಟ್ಟಿಯಾಗಿದೆ.

malaika

ಇದೀಗ ‘ನನ್ನ ಲೇಝಿ ಬಾಯ್’ ಎಂದು ಅರ್ಜುನ್ ಖಾಸಗಿ ಫೋಟೋವನ್ನ ನಟಿ ಶೇರ್ ಮಾಡಿದ್ದಾರೆ. ಅರ್ಜುನ್ ಕಪೂರ್ ಮೈ ಮೇಲೆ ಬಟ್ಟೆ ಇಲ್ಲದೆ ಕಪ್ಪು ಬಣ್ಣದ ತಲೆದಿಂಬು ಇಟ್ಟುಕೊಂಡು ಕ್ಲಿಕ್ಕಿಸಿದ ಫೋಟೋವನ್ನು ಮಲೈಕಾ ಶೇರ್ ಮಾಡಿದ್ದಾರೆ. ಈ ಫೋಟೋ ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ. ನಟನ ಲುಕ್‌ಗೆ ನಾಚಿಕೆಗೇಡಿನ ಸಂಗತಿ ಎಂದು ನೆಟ್ಟಿಗರು ಕಾಮೆಂಟ್ ಮಾಡ್ತಿದ್ದಾರೆ.

Share This Article