ಪಡ್ಡೆಹುಡುಗರ ಕನಸಿನ ರಾಣಿಯಾಗಿ ಮಿಂಚಿರುವ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಬಹುಭಾಷಾ ನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದ ಲೇಡಿ ಸೂಪರ್ ಸ್ಟಾರ್ ಮಾಲಾಶ್ರೀ ಪುತ್ರಿ ರಾಧನಾ ರಾಮ್ ಕೂಡ ಬಣ್ಣದ ಲೋಕಕ್ಕೆ ಎಂಟ್ರಿ ಕೊಡ್ತಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕ ರಾಮು ಅವರ ಸಾಧನೆ ಕೊಡುಗೆ ಅಪಾರ. ಮಾಲಾಶ್ರೀ ಮತ್ತು ರಾಮು ದಂಪತಿ ಸಾಕಷ್ಟು ವರ್ಷಗಳಿಂದ ಕಲಾಸೇವೆ ಮಾಡುತ್ತಲ್ಲೇ ಬಂದವರು. ಇದೀಗ ಈ ಕುಟುಂಬದಿಂದ ಜ್ಯೂ.ಮಾಲಾಶ್ರೀ ರಾಧನಾ ರಾಮ್ ಕೂಡ ಚಿತ್ರರಂಗದಲ್ಲಿ ಮಿಂಚಲು ಸಕಲ ತಯಾರಿ ಮಾಡಿಕೊಂಡು ಬಂದಿದ್ದಾರೆ. ಇದನ್ನೂ ಓದಿ:ಪ್ರಾಣಿಗಳಿಗಾಗಿ ಬೆತ್ತಲಾಗುವಂತೆ ರಣವೀರ್ ಸಿಂಗ್ ಗೆ ಮನವಿ ಮಾಡಿದ ಪೇಟಾ



