Bengaluru CityCinemaDistrictsKarnatakaLatestMain PostSandalwoodTV Shows

ಮೊದಲ ಮಗುವಿನ ನಿರೀಕ್ಷೆಯಲ್ಲಿ `ಮಹಾದೇವಿ’ ಖ್ಯಾತಿಯ ಮಾನಸಾ ಜೋಷಿ

Advertisements

`ಬಹುಪರಾಕ್’ ಚಿತ್ರದ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ನಟಿ ಮಾನಸಾ ಜೋಷಿ ಸಾಕಷ್ಟು ಸೀರಿಯಲ್ ಮೂಲಕ ಜನಪ್ರಿಯತೆ ಗಳಿಸಿದ್ದರು. ಇದೀಗ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ತಾವು ತಾಯಿಯಾಗುತ್ತಿರುವ ಶುಭ ಸಮಾಚಾರವನ್ನು ವಿಶೇಷ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

`ಮಹಾದೇವಿ’ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ್ದ ಕಲಾವಿದೆ, ಹೆಚ್ಚೆಚ್ಚು ದೇವಿ ಪಾತ್ರಕ್ಕೆ ಜೀವ ತುಂಬುವ ಮೂಲಕ ಸೈ ಎನಿಸಿಕೊಂಡಿದ್ದರು. ನಂತರ `ಮಂಗಳ ಗೌರಿ’ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ಮಿಂಚಿದ್ದರು. ನಟನೆಯ ಮೂಲಕ ಸುದ್ದಿಯಲ್ಲಿದ್ದ ನಟಿ ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಶೇಷ ಫೋಟೋಶೂಟ್ ಮಾಡಿಸಿ, ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ಮದರ್ ತೆರೇಸಾ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಹರ್ಷಿಕಾ ಪೂಣಚ್ಚ

View this post on Instagram

 

A post shared by Manasa Joshi (@manasajoshi)

ಸಿನಿಮಾ, ಕಿರುತೆರೆ ಅಂತಾ ಬ್ಯುಸಿಯಿದ್ದ ಮಾನಸಾ ಜೋಷಿ ಈಗ ವೈಯಕ್ತಿಕ ಜೀವನದತ್ತ ಗಮನ ಕೊಡ್ತಿದ್ದಾರೆ. ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಒಟ್ನಲ್ಲಿ ನೆಚ್ಚಿನ ನಟಿಯ ಖುಷಿ ನೋಡಿ ಫ್ಯಾನ್ಸ್ ಶುಭ ಹಾರೈಸುತ್ತಿದ್ದಾರೆ.

Live Tv

Leave a Reply

Your email address will not be published.

Back to top button