ಕೆಂಡಸಂಪಿಗೆ, ಟಗರು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ನಟಿ ಮಾನ್ವಿತಾ ಕಾಮತ್ (Manvitha Kamath) ಅವರ ತಾಯಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಮಾನ್ವಿತಾ ತಾಯಿ ಸುಜಾತಾ ಕಾಮತ್‌ಗೆ (Sujatha Kamath) ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಏಪ್ರಿಲ್ 15) ಅವರು ಕೊನೆಯುಸಿರೆಳೆದಿದ್ದಾರೆ.
ನಟಿ ಮಾನ್ವಿತಾ ಕಾಮತ್ ತಾಯಿ ಸುಜಾತಾ ಅವರು ಕಳೆದ ಒಂದು ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರಿಗೆ ಕಿಡ್ನಿ ಕಸಿ ಮಾಡಿಸಲಾಗಿತ್ತು ಎನ್ನಲಾಗಿದೆ. ಕಳೆದ ವರ್ಷ ಹೈದರಾಬಾದ್‌ನಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಏ.14ರಂದು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಸುಜಾತಾ ಅವರನ್ನು ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ತಾಯಿಯ ಚಿಕಿತ್ಸೆಗಾಗಿ ಲಕ್ಷ ಲಕ್ಷ ಸುರಿದರು ಕೂಡ ಈ ಪ್ರಯತ್ನ ವಿಫಲ ಆಗಿದೆ.
ಈ ಹಿಂದೆ ಸುಜಾತಾ ಕಾಮತ್ ಅನಾರೋಗ್ಯ ಉಂಟಾದಾಗ ಸೋನು ಸೂದ್ ಸಹಾಯ ಮಾಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಮಾನ್ವಿತಾ ಕಾಮತ್, ಸೋನು ಸೂದ್ ಅವರ ಜತೆ ಮಾತನಾಡಿದೆ. ನನ್ನ ತಾಯಿಗೆ ಅವರು ಮಾಡಿದ ಸಹಾಯಕ್ಕೆ ಧನ್ಯವಾದ ಹೇಳಿದೆ. ನೀವು ನಿಜವಾದ ಹೀರೋ ಸರ್. ಎಲ್ಲದಕ್ಕೂ ಧನ್ಯವಾದ. ನಮ್ಮ ಸಂಕಷ್ಟದಲ್ಲಿ ಏಂಜಲ್ ರೀತಿ ಬಂದಿರಿ. ನಿಮ್ಮಿಂದಾಗಿ ನನ್ನ ತಾಯಿ ಇಂದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಗ ಮಾನ್ವಿತಾ ಬರೆದುಕೊಂಡಿದ್ದರು. ಇದೀಗ ಮಾನ್ವಿತಾ ಅವರ ತಾಯಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.