ಕರಾವಳಿ ನಟಿ ಮೇಘಾ ಶೆಟ್ಟಿ (Megha Shetty) ಅವರು ಇಂದು (ಆ.4) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನ ಅವರ ಮುಂದಿನ ಸಿನಿಮಾದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡುವ ಮೂಲಕ ಫ್ಯಾನ್ಸ್‌ಗೆ ಸೂಪರ್ ಸರ್ಪ್ರೈಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಬದುಕಿನಲ್ಲಿ ಎದುರಿಸಿದ ಏರಿಳಿತಗಳ ಬಗ್ಗೆ ಮಾತನಾಡಿದ ಸಮಂತಾ
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಮೇಘಾ ಶೆಟ್ಟಿ ಇದೀಗ ಅವರ ಮುಂಬರುವ 3 ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಈ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ಚಿತ್ರತಂಡ ತೆರೆ ಎಳೆದಿದ್ದಾರೆ. ಆಪರೇಷನ್ ಲಂಡನ್ ಕೆಫೆ, ಗ್ರಾಮಾಯಣ, ಚೀತಾ (Cheetah) ಸಿನಿಮಾಗಳ ಪೋಸ್ಟರ್‌ನಲ್ಲಿ ಡಿಫರೆಂಟ್ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.
‘ಆಪ್ಟರ್ ಆಪರೇಷನ್ ಲಂಡನ್ ಕೆಫೆ’ (After Operation London Cafe) ಸಿನಿಮಾದಲ್ಲಿ ಲಂಗ ದಾವಣಿ ಧರಿಸಿ ನಟಿ ಮುದ್ದಾಗಿ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿದೆ. ಈ ಚಿತ್ರಕ್ಕೆ ಸಡಗರ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರದ ಟೀಸರ್ ಮತ್ತು ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ. ಕವೀಶ್ ಶೆಟ್ಟಿಗೆ ಮೇಘಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ.
View this post on Instagram
‘ಗ್ರಾಮಾಯಣ’ (Gramayana) ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್‌ಗೆ ಮೇಘಾ ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲೂ ಭಿನ್ನ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ. ಈ ಚಿತ್ರವನ್ನು ಜಿ. ಮನೋಹರ್ ಮತ್ತು ಶ್ರೀಕಾಂತ್ ಕೆ.ಪಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ದೇವನೂರು ಚಂದ್ರು ನಿರ್ದೇಶನ ಮಾಡಿದ್ದಾರೆ.
View this post on Instagram
ಪ್ರಜ್ವಲ್ ದೇವರಾಜ್ ನಟನೆಯ ‘ಚೀತಾ’ (Cheetah) ಸಿನಿಮಾದಲ್ಲಿ ಮೇಘಾ ಶೆಟ್ಟಿ ಲೀಡ್ ರೋಲ್‌ನಲ್ಲಿ ನಟಿಸಿದ್ದು, ರೌದ್ರಾವತಾರದಲ್ಲಿ ಕಾಣಿಸಿಕೊಂಡಿರುವ ನಟಿಯ ಪೋಸ್ಟರ್ ಈಗ ರಿವೀಲ್ ಆಗಿದೆ. ಮೇಘಾ ನಟಿಸಿರುವ 3 ಸಿನಿಮಾಗಳ ಪೋಸ್ಟರ್ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.
ಅಂದಹಾಗೆ, ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಅನು ಸಿರಿಮನೆ ಪಾತ್ರದಿಂದ ಮನಗೆದ್ದ ನಟಿ ಮೇಘಾ ಬೆಳ್ಳಿಪರದೆಯಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ಮಿಂಚುತ್ತಿದ್ದಾರೆ.