‘ಚಾರ್‌ಮಿನಾರ್’ ನಟಿ ಮೇಘನಾ ಗಾಂವ್ಕರ್ (Meghana Gaonkar) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 6 ವರ್ಷಗಳ ಸತತ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಮುಂಬೈ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಮತ್ತು ಸಾಹಿತ್ಯ ವಿಷಯದಲ್ಲಿ ನಟಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಭ್ರಮವನ್ನು ಮೇಘನಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್, ರಜತ್ ಬಂಧನ ಕೇಸ್‌ಗೆ ಟ್ವಿಸ್ಟ್ – ಮಧ್ಯರಾತ್ರಿಯೇ ಇಬ್ಬರೂ ರಿಲೀಸ್
ತಾವು ಪಿಎಚ್‌ಡಿ ಮಾಡಿದ ಜರ್ನಿ ಬಗ್ಗೆ ಮೇಘನಾ ಮಾತನಾಡಿ, ಇವತ್ತು ನಾನು ನಿಮ್ಮೆಲ್ಲರ ಜೊತೆ ಹೆಮ್ಮೆಯ ವಿಚಾರವನ್ನು ಹಂಚಿಕೊಳ್ಳುತ್ತಿದ್ದೇನೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಕಳೆದ 6 ವರ್ಷಗಳಿಂದ ನಾನು ನನ್ನ ಪಿಎಚ್‌ಡಿ ಮಾಡುತ್ತಿದ್ದೆ. 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿದ್ದೇನೆ. ಇದು ತುಂಬಾ ವಿಶೇಷವಾದದ್ದು. ಯಾಕೆಂದರೆ ಈ ಪಿಎಚ್‌ಡಿ ಪಯಣ ಅಷ್ಟು ಸುಲಭ ಆಗಿರಲಿಲ್ಲ ಎಂದಿದ್ದಾರೆ.
View this post on Instagram
ನಾನು ನನ್ನ ಈ ಪಿಎಚ್‌ಡಿ ಡಾಕ್ಟರೇಟ್ ಪದವಿಯನ್ನು ನನ್ನ ತಂದೆಗೆ ಅರ್ಪಿಸುತ್ತೇನೆ. ಯಾಕೆಂದರೆ ನಾನು ಪಿಎಚ್‌ಡಿ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸಾಗಿತ್ತು. ನನ್ನ ಪಿಎಚ್‌ಡಿ ವಿಷಯ ಸಿನಿಮಾ ಮತ್ತು ಸಾಹಿತ್ಯ ಆಗಿತ್ತು. ಈ ವಿಷಯ ನನಗೆ ತುಂಬಾ ಹತ್ತಿರವಾಗಿತ್ತು. ಈ ವಿಡಿಯೋ ಮೂಲಕ ನಾನು ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ. ಯಾಕೆಂದರೆ ನಾನು ಮೊದಲು ಪಿಎಚ್‌ಡಿ ಬಗ್ಗೆ ಹೇಳಿಕೊಂಡ ದಿನದಿಂದ ಈವರೆಗೆ ನೀವೆಲ್ಲರೂ ನನಗೆ ತುಂಬಾ ಬೆಂಬಲಿಸಿದ್ದೀರಿ. ಈ ಪಯಣದಲ್ಲಿ ನನ್ನ ಜೊತೆಯಲ್ಲಿ ನಿಂತಿರುವುದಕ್ಕಾಗಿ ನಿಮಗೆ ತುಂಬಾ ಧನ್ಯವಾದಗಳು ಎಂದಿದ್ದಾರೆ. ನಟಿಯ ಸಾಧನೆಗೆ ಅಭಿಮಾನಿಗಳು, ಸ್ಯಾಂಡಲ್‌ವುಡ್ ಕಲಾವಿದರು ಮೆಚ್ಚುಗೆ ಸೂಚಿಸಿದ್ದಾರೆ.
View this post on Instagram
ಅಂದಹಾಗೆ, ಚಾರ್‌ಮಿನಾರ್, ಛೂ ಮಂತರ್, ದಿ ಜಡ್ಜ್‌ಮೆಂಟ್, ಶಿವಾಜಿ ಸುರತ್ಕಲ್ 2 ಸೇರಿದಂತೆ ಹಲವು ಸಿನಿಮಾಗಳಲ್ಲಿ ಮೇಘನಾ ನಾಯಕಿಯಾಗಿ ನಟಿಸಿದ್ದಾರೆ.