Connect with us

Bengaluru City

ಇಂದ್ರಜಿತ್ ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಲಿ- ವಾಣಿಜ್ಯ ಮಂಡಳಿಗೆ ಮೇಘನಾ ಪತ್ರ

Published

on

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದ್ದು, ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ನಟಿ ಮೃಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಇಂದು ಫಿಲಂ ಚೇಂಬರ್ ನಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ಎನ್.ಎಮ್ ಸುರೇಶ್ ಅವರು ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೆ ಮೇಘನಾ ರಾಜ್ ಬರೆದ ಪತ್ರವನ್ನು ಓದಿದ್ದಾರೆ. ಪತ್ರದಲ್ಲಿ ಇಂದ್ರಜಿತ್ ಮಾತುಗಳ ನನಗೆ ಮಾನಸಿಕ ತೊಳಲಾಟಕ್ಕೆ ತಳ್ಳಿವೆ. ಗರ್ಭಿಣಿ ಆಗಿರುವ ನಾನು ಮಾನಸಿಕ ತೊಳಲಾಟದಲ್ಲಿದ್ದೇನೆ. ನನ್ನ ದಿವಂಗತ ಪತಿ ಮೇಲೆ ಇಂದ್ರಜಿತ್ ಆರೋಪ ಮಾಡಿದ್ದಾರೆ. ಇಂದ್ರಜಿತ್ ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಲಿ ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಮೇಘನಾ ರಾಜ್ ಪತ್ರದ ಹಿನ್ನೆಲೆಯಲ್ಲಿ ಇಂದ್ರಜಿತ್ ಅವರಿಗೆ ಪತ್ರ ಬರೆಯುತ್ತೇವೆ. ಈ ಮೂಲಕ ಮೇಘನಾಬರೆದ ಪತ್ರದ ವಿಷಯವನ್ನು ಇಂದ್ರಜಿತ್ ಗಮನಕ್ಕೆ ತರುವುದಾಗಿ ಕೆ.ವಿ ಚಂದ್ರಶೇಖರ್ ತಿಳಿಸಿದರು.

ಇಂದ್ರಜಿತ್ ಹೇಳಿದ್ದೇನು?:
ಮೂರನೇ ಪೀಳಿಗೆಯ ಮತ್ತು ಇತ್ತೀಚಿಗೆ ಬಂದ ನಟ-ನಟಿಯರು ಡ್ರಗ್ಸ್ ದಂಧೆಯಲ್ಲಿ ಇದ್ದಾರೆ ಎಂಬುದು ನನಗೆ ಗೊತ್ತಿತ್ತು. ಎಲ್ಲಿ ಎಲ್ಲಿ ಯಾವ ಯಾವ ತೋಟದಲ್ಲಿ, ರೆಸಾರ್ಟಿನಲ್ಲಿ ಮತ್ತು ರಾಜಕಾರಣಿಗಳ ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದಾರೆ ಎಂಬುದು ಎಲ್ಲ ಗೊತ್ತಿತ್ತು. ನಾವು, ಹಿರಿಯ ನಟರು ಮತ್ತು ನಿರ್ಮಾಪಕರ ಈ ವಿಚಾರದ ಬಗ್ಗೆ ಮಾತನಾಡಿ ಶಾಕ್ ಆಗಿದ್ದು ಉಂಟು. ಇದರ ಬಗ್ಗೆ ಹಿರಿಯ ನಟರಾದ ನನ್ನ ಸ್ನೇಹಿತರು ನೋವನ್ನು ವ್ಯಕ್ತಪಡಿಸಿದ್ದಾರೆ. ನಾನು ಇವತ್ತು ಮೀಡಿಯಾ ಮುಂದೆ ಬರಲು ಕಾರಣ ಸುದ್ದಿವಾಹಿನಿಯಲ್ಲಿ ಇಡೀ ಚಿತ್ರರಂಗವೇ ಡ್ರಗ್ಸ್ ಮಾಫಿಯಾದಲ್ಲಿ ಇದೆ ಎಂದು ತೋರಿಸುತ್ತಿರುವುದು ನನಗೆ ನೋವಾಗಿದೆ. ಆದರೆ ಇತ್ತೀಚಿಗೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ ಎಂದು ಪ್ರಶ್ನಿಸಿದ್ದರು.

ಹೇಳಿಕೆ ವಾಪಸ್ ಪಡೆದ ನಿರ್ದೇಶಕ:
ಈ ವಿಚಾರ ಭಾರೀ ಚರ್ಚೆಯಾಗುತ್ತಿದ್ದಂತೆಯೇ ಇಂದ್ರಜಿತ್ ಅವರು ತನ್ನ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದರು. ಮೊದಲ ಬಾರಿಗೆ ಸಿಸಿಬಿ ವಿಚಾರಣೆ ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಚಿರಂಜೀವಿ ಸರ್ಜಾ ಅವರ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಅರ್ಜುನ್ ಸರ್ಜಾ, ಚಿರಂಜೀವಿ ಸರ್ಜಾ ಹಾಗೂ ಸುಂದರ್ ರಾಜ್ ಅವರ ಬಗ್ಗೆ ನೀಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದರು.

Click to comment

Leave a Reply

Your email address will not be published. Required fields are marked *