ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಸಾಲು ಸಾಲಾಗಿ ನಟ-ನಟಿಯರ ಮದುವೆ ನಡೆಯುತ್ತಿದೆ. ನಟ ನಿಖಿಲ್ ಕುಮಾರಸ್ವಾಮಿ ನಿನ್ನೆಯಷ್ಟೇ ತನ್ನ ಎಂಗೇಜ್‍ಮೆಂಟ್ ಮಾಡಿಕೊಂಡಿದ್ದು, ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಇದೀಗ ಮತ್ತೊಬ್ಬ ನಟ ಹಸೆಮಣೆ ಏರಲು ಸಜ್ಜಾಗಿದ್ದಾರೆ.
Advertisement
ಹೌದು. ಕೃಷ್ಣ ಅವರ ಮೊದಲ ಹೆಸರು ಸುನಿಲ್ ಕುಮಾರ್. ಕೃಷ್ಣ ರುಕ್ಮಿಣಿ ಎಂಬ ಧಾರಾವಾಹಿ ಮೂಲಕ ನಟನಾಕ್ಷೇತ್ರಕ್ಕೆ ಕಾಲಿಟ್ಟು, ಮದರಂಗಿ ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಡಾರ್ಲಿಂಗ್ ಕೃಷ್ಣ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಈ ಮೂಲಕ ಬಹುದಿನಗಳಿಂದ ಕೇಳಿಬರುತ್ತಿದ್ದ ಗಾಸಿಪ್ ಗಳಿಗೆ ತೆರೆಬಿದ್ದಿದೆ.
Advertisement
Advertisement
ಕೆಲ ದಿನಗಳ ಹಿಂದೆ ನಟಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಬಗ್ಗೆ ಕೆಲವೊಂದು ಗಾಸಿಪ್ ಗಳು ಹರಿದಾಡುತ್ತಿದ್ದವು. ಆದರೆ ಇಬ್ಬರೂ ಈ ಬಗ್ಗೆ ಒಪ್ಪಿಕೊಂಡಿರಲಿಲ್ಲ. ಇದೀಗ ತಮ್ಮ ಪ್ರೀತಿಯ ಬಗ್ಗೆ ಇಬ್ಬರೂ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ನಟನೆಯ ‘ಲವ್ ಮಾಕ್ಟೇಲ್’ ಚಿತ್ರ ಇತ್ತೀಚೆಗೆ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಂಡಿದೆ. ಈ ಯಶಸ್ಸಿನ ಸಂಭ್ರಮದ ಬೆನ್ನಲ್ಲೇ ಜೋಡಿ ತಮ್ಮ ಮದುವೆಯ ಗುಟ್ಟನ್ನು ರಟ್ಟು ಮಾಡಿದೆ.
Advertisement
ಸಿನಿಮಾ ಚಟುವಟಿಕೆಗಳಲ್ಲಿ ಜೊತೆಯಾಗಿಯೇ ಪಾಲ್ಗೊಳ್ಳುತ್ತಿದ್ದ ಇಬ್ಬರ ಮಧ್ಯೆ ಉತ್ತಮ ಒಡನಾಟವಿತ್ತು. ಇವರಿಬ್ಬರು ಪ್ರೀತಂ ಗುಬ್ಬಿ ನಿರ್ದೇಶನದ ‘ನಮ್ ದುನಿಯಾ ನಮ್ ಸ್ಟೈಲ್’ ಚಿತ್ರದಲ್ಲಿ ಮೊದಲು ಜೊತೆಯಾಗಿ ಕಾಣಿಸಿಕೊಂಡಿದ್ದರು. ಆ ಬಳಿಕ ಇತ್ತೀಚೆಗೆ ಬಿಡುಗಡೆಯಾದ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿಯೂ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿ ಜರ್ನಿಯೇ ಇವರಿಬ್ಬರ ಮಧ್ಯೆ ಪ್ರೀತಿ ಹುಟ್ಟಿಕೊಳ್ಳಲು ಕಾರಣವಾಗಿದ್ಯಂತೆ.
ಮೊದ್ಲು ಪ್ರಪೋಸ್ ಮಾಡಿದ್ದೇ ಕೃಷ್ಣ:
ಡಾರ್ಲಿಂಗ್ ಕೃಷ್ಣ ತನ್ನ ಮನದ ಬಯಕೆಯನ್ನು ಮಿಲನಾ ಬಳಿ ಹಂಚಿಕೊಳ್ಳುತ್ತಿದ್ದಂತೆಯೇ ಇಬ್ಬರ ಮನೆಯಲ್ಲೂ ಮದುವೆ ಮಾತುಕತೆ ನಡೆದೇ ಹೋಗಿತ್ತು. ಆದರೆ ಈ ವಿಚಾರ ಆಪ್ತರು ಹಾಗೂ ಕುಟುಂಬದ ಸದಸ್ಯರಿಗೆ ಮಾತ್ರ ತಿಳಿದಿತ್ತೇ ವಿನಃ ಜೋಡಿ ಈ ಬಗ್ಗೆ ಎಲ್ಲೂ ಹೇಳಿಕೊಂಡಿರಲಿಲ್ಲ.
ಇದೀಗ ತಮ್ಮ ‘ಲವ್ ಮಾಕ್ಟೇಲ್’ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ಅವರು ಸುದ್ದಿಗೋಷ್ಠಿ ನಡೆಸಿದಾಗ ತಮ್ಮ ಪ್ರೀತಿಯನ್ನು ಬಹಿರಂಗ ಪಡಿಸಿದ್ದಾರೆ. ಸದ್ಯ ಈ ಇಬ್ಬರಿಗೂ ಎಲ್ಲರೂ ಶುಭ ಕೋರುತ್ತಿದ್ದು, ಆದರೆ ಮದುವೆ ಯಾವಾಗ ಎಂಬುದು ಇನ್ನೂ ನಿಗದಿಯಾಗಿಲ್ಲ.
ಒಟ್ಟಿನಲ್ಲಿ ಈ ಜೋಡಿ ಸಿನಿಮಾ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದು, ‘ನಮ್ಮಿಬ್ಬರ ನಡುವೆ ಆತ್ಮೀಯತೆ ಇದ್ದುದರಿಂದಲೇ ‘ಲವ್ ಮಾಕ್ಟೇಲ್’ ಸಿನಿಮಾವನ್ನು ಜೊತೆಯಾಗಿ ಮಾಡಲು ಸಾಧ್ಯವಾಯಿತು. ಸದ್ಯ ನಾವಿಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದೇವೆ. ಹೀಗಾಗಿ ಮದುವೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅಲ್ಲದೆ ಮತ್ತೆ ಜೊತೆಯಾಗಿ ಸಿನಿಮಾ ಮಾಡುವ ಬಗ್ಗೆಯೂ ಸದ್ಯಕ್ಕೆ ಯಾವುದೇ ಪ್ಲಾನ್ ಮಾಡಿಲ್ಲ’ ಎಂದು ಮಿಲನಾ ತಿಳಿಸಿದ್ದಾರೆ.