ಸ್ಯಾಂಡಲ್‌ವುಡ್ ಬೆಸ್ಟ್ ಜೋಡಿಗಳಲ್ಲಿ ಒಂದಾಗಿರುವ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಮಿಲನಾ ನಾಗರಾಜ್ (Milana Nagaraj) ಇದೀಗ ಚೊಚ್ಚಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಇದೀಗ ನಟಿ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಹೊಸ ಸಿನಿಮಾ ಘೋಷಿಸಿದ ಸನ್ನಿ ಡಿಯೋಲ್
- Advertisement -
ಪತಿ ಡಾರ್ಲಿಂಗ್ ಕೃಷ್ಣ ಜೊತೆ ವಿವಿಧ ಭಂಗಿಯಲ್ಲಿ ನಟಿ ಮಿಲನಾ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಹಳದಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮಿಂಚಿದ್ದಾರೆ. ಮೊದಲ ಬಾರಿಗೆ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ. ಪೋಷಕರಾಗುತ್ತಿರುವ ‘ಲವ್ ಮಾಕ್ಟೈಲ್’ (Love Mocktail Film) ಜೋಡಿಗೆ ಅಭಿಮಾನಿಗಳು ಬಗೆ ಬಗೆಯ ಕಾಮೆಂಟ್‌ಗಳ ಮೂಲಕ ವಿಶ್ ಮಾಡಿದ್ದಾರೆ.
- Advertisement -
View this post on Instagram
- Advertisement -
ಅಂದಹಾಗೆ, ಮಾರ್ಚ್ 8ರಂದು ತಾಯಿಯಾಗ್ತಿರುವ ಬಗ್ಗೆ ನಟಿ ಗುಡ್ ನ್ಯೂಸ್ ಹಂಚಿಕೊಂಡಿದ್ದರು. ನಮಗೆ ಹಾರೈಸಿ ಎಂದು ಅಡಿಬರಹ ನೀಡಿ ಸಿಹಿಸುದ್ದಿ ತಿಳಿಸಿದ್ದರು.
- Advertisement -
2021ರಲ್ಲಿ ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ಹೊಸ ಬಾಳಿಗೆ ಕಾಲಿಟ್ಟರು. ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು.