ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಂಗ್ಲಾದೇಶದ ಯುವ ನಟಿ ರಿಷ್ತಾ ಲಬೋನಿ ಶಿಮಾನಾ (Rishta Laboni Shimana) ವಿಧಿವಶರಾಗಿದ್ದಾರೆ. ಮಾಡೆಲ್ ಆಗಿಯೂ ಗಮನ ಸೆಳೆದಿದ್ದ 39ನೇ ವಯಸ್ಸಿನ ರಿಷ್ತಾ ಬ್ರೈನ್ ಹ್ಯಾಮ್ರೇಜ್‌ನಿಂದ ಆಸ್ಪತ್ರೆ ದಾಖಲಾಗಿದ್ದರು. ಕಳೆದ 14 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರಿಷ್ತಾ ಜೂನ್ 5ರಂದು ನಿಧನರಾಗಿದ್ದಾರೆ. ಇದನ್ನೂ ಓದಿ:ಡಾಲಿ ಧನಂಜಯ ನಟನೆಯ ’ಕೋಟಿ’ ಟ್ರೈಲರ್ ಔಟ್
ನಟಿಯ ಸಾವಿನ ಸುದ್ದಿಯನ್ನು ಸಹೋದರ ಇಜಾಜ್ ಬಿನ್ ಮತ್ತು ಮಾಜಿ ಪತಿ ಪರ್ವೇಜ್ ಸಜ್ಜದ್ ಖಚಿತಪಡಿಸಿದ್ದಾರೆ. ಮೇ.21ರಂದು ಬ್ರೈನ್ ಹ್ಯಾಮ್ರೇಜ್ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ರಿಷ್ತಾರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಶೇಕ್ ಮುಜೀಬ್ ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಟಿ ಮೃತಪಟ್ಟಿದ್ದಾರೆ. ಮೇ.21ರಂದು ನಟಿ ರಿಷ್ತಾರ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ಪ್ರಜ್ಞೆ ತಪ್ಪಿದ ನಟಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ತಕ್ಷಣ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ನಟಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎಂದಿದ್ದರು. ಮೇ 25ರಂದು ನ್ಯೂರೋಸೈನ್ಸ್ ಆಸ್ಪತ್ರೆಗೆ ದಾಖಲಿಸಿ ಮೆದುಳಿನ ಸರ್ಜರಿ ಕೂಡ ಮಾಡಲಾಗಿತ್ತು. ಸರ್ಜರಿ ಬಳಿಕ ನಟಿಯ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ಶೇಕ್ ಮುಜೀಬ್ ಮೆಡಿಕಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೇ.29ರಿಂದ ವೆಂಟಿಲೇಟರ್ ನೆರವಿನಲ್ಲಿದ್ದ ನಟಿ ರಿಷ್ತಾ ಜೂನ್ 5ರಂದು ನಿಧನರಾಗಿದ್ದಾರೆ.
ಬಾಂಗ್ಲಾದ ಹಲವು ಸಿನಿಮಾದಲ್ಲಿ ನಾಯಕಿಯಾಗಿ ರಿಷ್ತಾ ಕಾಣಿಸಿಕೊಂಡಿದ್ದಾರೆ. ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. 2014ರಲ್ಲಿ ಗಾಯಕ ಪರ್ವೆಜ್ ಸಜ್ಜದ್ ಜೊತೆ ಮದುವೆಯಾಗಿದ್ದರು. ಮದುವೆಯಾದ ಕೆಲವೇ ವರ್ಷಗಳಲ್ಲಿ ಇಬ್ಬರ ದಾಂಪತ್ಯ ಮುರಿದು ಬಿದ್ದಿತ್ತು. ಇದೀಗ ನಟಿಯ ನಿಧನಕ್ಕೆ ಬಾಂಗ್ಲಾದೇಶ ಸಿನಿಮಾರಂಗ, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.