ತೆಲುಗಿನಲ್ಲಿ ಮೃಣಾಲ್ ಠಾಕೂರ್ (Mrunal Thakur) ನಟಿಸಿದ 3 ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಹಿಟ್ ಆಗಿವೆ. ಹಾಗಾಗಿ ಅವರೀಗ ತಮಿಳಿನತ್ತ ಮುಖ ಮಾಡಿದ್ದಾರೆ. ತಮಿಳಿನ ಸ್ಟಾರ್ ನಟ ಸೂರ್ಯ (Suriya) ನಟಿಸಲಿರುವ ಹೊಸ ಚಿತ್ರಕ್ಕೆ ನಾಯಕಿಯಾಗಿ ‘ಸೀತಾರಾಮಂ’ (Seetharamam) ನಟಿ ಮೃಣಾಲ್ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ.
- Advertisement 2-
ಸೂರ್ಯ ಅವರ ಮುಂದಿನ ಸಿನಿಮಾ ಫ್ಯಾಂಟಸಿ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬರುತ್ತಿದೆ. ಈ ಚಿತ್ರವನ್ನು ಆರ್‌ಜೆ ಬಾಲಾಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಮೃಣಾಲ್ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಇನ್ನೂ ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ. ಇದನ್ನೂ ಓದಿ:ತ್ರಿವಿಕ್ರಮ್ ಗೋಮುಖ ವ್ಯಾಘ್ರ: ಕೆರಳಿದ ಮೋಕ್ಷಿತಾ
- Advertisement 3-
- Advertisement 4-
ಈ ಹಿಂದೆ ಮೃಣಾಲ್‌ಗೆ ‘ಕಂಗುವ’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಒಪ್ಪಿಕೊಂಡಿರುವ ಸಿನಿಮಾಗಳಿದ್ದ ಹಿನ್ನೆಲೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಈ ಚಿತ್ರವನ್ನು ಮೃಣಾಲ್ ಮಿಸ್ ಮಾಡಿಕೊಂಡಿದ್ದರು. ಆ ನಂತರ ‘ಕಂಗುವ’ (Kanguva) ಚಿತ್ರದ ಆಫರ್ ದಿಶಾ ಪಟಾನಿ ಪಾಲಾಯಿತು.
ಸದ್ಯ ಪೂಜಾ ಮೇರಿ ಜಾನ್, ಹೇ ಜವಾನಿ ತೋ ಇಷ್ಟ ಹೋನಾ ಹಿ, ಸನ್ ಆಫ್ ಸರ್ದಾರ್ 2, ತುಮ್ ಓಹ್ ಹೋ ಚಿತ್ರಗಳಲ್ಲಿ ಮೃಣಾಲ್ ನಟಿಸುತ್ತಿದ್ದಾರೆ.