ಸೈಬರ್ (Cyber) ಖದೀಮರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಾನಾ ರೂಪದಲ್ಲಿ ಅವರೆಲ್ಲ ವಂಚನೆ (Fraud) ಮಾಡುತ್ತಿದ್ದು, ನಟಿ ನಗ್ಮಾ (Nagma) ಸೈಬರ್ ವಂಚಕರು ಬೀಸಿದ್ದ ಬಲೆಗೆ ಬಿದ್ದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ಸಾಕಷ್ಟು ಹಣವನ್ನೂ ಅವರು ಕಳೆದುಕೊಂಡಿದ್ದಾರೆ. ಬ್ಯಾಂಕ್ ಹೆಸರಿನಲ್ಲಿ ನಗ್ಮಾಗೆ ಕರೆ ಮಾಡಿದ್ದ ವಂಚಕರು, ಕ್ಷಣಾರ್ಧದಲ್ಲೇ ಅವರ ಖಾತೆಯನ್ನು ಹಣವನ್ನು ದೋಚಿಸಿದ್ದಾರೆ.
Advertisement
ಫೆಬ್ರವರಿ 28 ರಂದು ನಗ್ಮಾ ಅವರ ಮೊಬೈಲ್ ಸಂಖ್ಯೆಗೆ ಮಸೇಜ್ ಬಂದಿದೆ. ಬ್ಯಾಂಕ್ ಖಾತೆಗಾಗಿ ಕೆವೈಸಿ ಭರ್ತಿ ಮಾಡಿ ಎಂದು ಮಸೇಜ್ ನಲ್ಲಿ ಉಲ್ಲೇಖಿಸಲಾಗಿದೆ. ಮಸೇಜ್ ಬಂದ ಹಿಂದೆಯೇ ಖದೀಮರು ಕಾಲ್ ಕೂಡ ಮಾಡಿದ್ದಾರೆ. ಮಸೇಜ್ ಹೇಳಿದಂತೆ ಭರ್ತಿ ಮಾಡಲು ತಿಳಿಸಿದ್ದಾರೆ. ಅದು ಬ್ಯಾಂಕ್ ನಿಂದ ಬಂದಿರುವ ಕರೆ ಎಂದು ನಂಬಿರುವ ನಗ್ಮಾ ಕೆವೈಸಿ ಭರ್ತಿ ಮಾಡಿದ್ದಾರೆ. ಕ್ಷಣಾರ್ಧಲ್ಲೆ ಅವರ ಬ್ಯಾಂಕ್ ಖಾತೆಯಿಂದ ಒಂದು ಲಕ್ಷ ರೂಪಾಯಿ ಡ್ರಾ ಆಗಿದೆ. ಇದನ್ನೂ ಓದಿ: ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ
Advertisement
Advertisement
ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸೈಬರ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಸೈಬರ್ ವಂಚನೆಯ ಕುರಿತು ಸಾಕಷ್ಟು ಜಾಗ್ರತೆ ಮೂಡಿಸುತ್ತಿದ್ದರೂ, ಬುದ್ಧಿವಂತರೇ ಹೆಚ್ಚು ಮೋಸ ಹೋಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದಿದ್ದಾರೆ ಸೈಬರ್ ಪೊಲೀಸ್ ಅಧಿಕಾರಿಗಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರಿಗೆ ಬಲೆ ಬೀಸಿದ್ದಾರೆ.