ತಮಿಳಿನ ಲೇಡಿ ಸೂಪರ್ ಸ್ಟಾರ್ ನಯನತಾರಾಗೆ (Nayanthara) ವಯಸ್ಸು 40 ಆದ್ರೂ ಅವರ ಮೇಲಿನ ಕ್ರೇಜ್ ಫ್ಯಾನ್ಸ್‌ಗೆ ಕಮ್ಮಿಯಾಗಿಲ್ಲ. ಮದುವೆಯಾಗಿದ್ರೂ ಅವರಿಗೆ ಸಿನಿಮಾಗಳ ಅವಕಾಶಕ್ಕೆ ಬ್ರೇಕ್ ಬಿದ್ದಿಲ್ಲ. ಹೀಗಿರುವಾಗ ಈ ವರ್ಷ ಸಾಲು ಸಾಲು ಸಿನಿಮಾಗಳು ರಿಲೀಸ್‌ಗೆ ಸಜ್ಜಾಗಿದೆ.
ಸದ್ಯ ಮಕ್ಕಳ ಆರೈಕೆ ನಡುವೆಯೂ ಸಾಲು ಸಾಲು ಸಿನಿಮಾಗಳ ಶೂಟಿಂಗ್ ಮಾಡಿ ಸೈ ಎನಿಸಿಕೊಂಡಿದ್ದಾರೆ. ಮಾಧವನ್ ಹಾಗೂ ಸಿದ್ಧಾರ್ಥ್ ಜೊತೆ ಟೆಸ್ಟ್ ಸಿನಿಮಾದಲ್ಲಿ ನಯನತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾದ ಡೇಟ್ ಕೂಡ ಅನೌನ್ಸ್ ಆಗಲಿದೆ.
ಸುಂದರ್ ಸಿ. ಜೊತೆ ‘ಮೂಕುತಿ ಅಮ್ಮನ್ 2’ ಸಿನಿಮಾದಲ್ಲಿ ನಯನತಾರಾ ನಟಿಸಿದ್ದಾರೆ. ದೇವಿಯಾಗಿ ಮತ್ತೆ ನಟಿ ಅವತಾರ ತಾಳಲಿದ್ದಾರೆ. ಇದನ್ನೂ ಓದಿ:ಮಹಿಳೆಯ ಚಪ್ಪಲಿ ಎತ್ತಿ ಕೊಟ್ಟ ಧ್ರುವ ಸರ್ಜಾ- ಆ್ಯಕ್ಷನ್ ಪ್ರಿನ್ಸ್ ಸರಳತೆಗೆ ಫ್ಯಾನ್ಸ್ ಫಿದಾ
ಯಶ್ ಜೊತೆ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಅದಕ್ಕಾಗಿ ಬೆಂಗಳೂರಿಗೆ ಬಂದು ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.
ಇದರೊಂದಿಗೆ ಒಂದಿಷ್ಟು ಸಿನಿಮಾಗಳು ಲೈನ್ ಅಪ್ ಆಗಿದೆ. ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಿನಿಮಾಗಳಾಗಿದ್ದು, ಇನ್ನೂ ಅನೌನ್ಸ್ ಆಗಬೇಕಿದೆ. ಹೊಸಬರಿಗೆ ಅವಕಾಶ ಕೊಡುವ ಸಲುವಾಗಿ ತಮ್ಮದೇ ನಿರ್ಮಾಣ ಸಂಸ್ಥೆಯಿಂದ ಅವರು ನಿರ್ಮಾಣ ಮಾಡುತ್ತಿದ್ದಾರೆ.