ನಿನ್ನೆಯಷ್ಟೇ ತಾವು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ (Nayantara) ಮತ್ತು ವಿಘ್ನೇಶ್ ಶಿವನ್ ಘೋಷಿಸಿದ್ದರು. ಅದು ಅವಳಿ ಜವಳಿ ಮಕ್ಕಳಾಗಿರುವ ಮತ್ತು ಆ ಮಗುವಿಗೆ ಹೆಸರೂ ಇಟ್ಟಿರುವ ಕುರಿತು ಖುಷಿಯನ್ನು ಹಂಚಿಕೊಂಡಿದ್ದರು. ಮನೆಗೆ ಮಕ್ಕಳು ಬಂದು ಖುಷಿಯಲ್ಲಿರುವ ದಂಪತಿಗೆ ತಮಿಳುನಾಡು (Tamil Nadu) ಸರಕಾರ ಶಾಕ್ ಮೂಡಿಸಿದೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದದ್ದು ನಿಯಮಗಳ ಪ್ರಕಾರವೇ ಇದೆಯಾ ಎಂದು ಕೇಳಿದೆ.
Advertisement
ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ (Vignesh Sivan) ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು ನಾಡು ಸರಕಾರ (Government) ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.
Advertisement
Advertisement
ಬಾಡಿಗೆ ತಾಯಿಯಿಂದ (Surrogate Mother) ಮಗು ಪಡೆಯಲು ಇವೆಲ್ಲ ನಿಯಮಗಳನ್ನು ಪಾಲಿಸಲೇಬೇಕಿದೆ. ಆದರೆ, ನಯನ ದಂಪತಿ ಇವುಗಳನ್ನು ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ (Investigation) ಆದೇಶಿಸಿದೆ. ಈ ತನಿಖೆಯು ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗಂ ಜೊತೆ ಆಟವಾಡುತ್ತಿದ್ದ ದಂಪತಿಗೆ ಶಾಕ್ ಮೂಡಿಸಿದೆ. ಇದನ್ನೂ ಓದಿ:ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್
Advertisement
ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು.
ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.