Connect with us

Bengaluru City

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನೇಹಾ ಪಾಟೀಲ್

Published

on

ಬೆಂಗಳೂರು: ಸ್ಯಾಂಡಲ್‍ವುಡ್ ನಲ್ಲಿ ಒಬ್ಬರ ನಂತರ ಒಬ್ಬರಂತೆ ವಿವಾಹವಾಗುತ್ತಿದ್ದು, ಇದೀಗ ನಟಿ ನೇಹಾ ಪಾಟೀಲ್ ಅವರು ಪ್ರಣವ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹುಬ್ಬಳ್ಳಿ ಮೂಲದ ನಟಿ ನೇಹಾ ಪಾಟೀಲ್ ಅವರು ಸಿನಿಮಾ ಬಗ್ಗೆ ಆಸಕ್ತಿ ಇರುವ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಹುಡುಗ ಪ್ರಣವ್ ಅವರ ಜೊತೆ ಮದುವೆಯಾಗಿದ್ದಾರೆ. ಗುರುವಾರ ವಿಜಯನಗರದ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಆರತಕ್ಷತೆ ನೆರವೇರಿದ್ದು, ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆರತಕ್ಷತೆಯಲ್ಲಿ ನಟಿ ದಿಪೀಕಾ ದಾಸ್, ಶರಣ್ಯ, ನಿರ್ದೇಶಕ ಮುರಳಿಕೃಷ್ಣ ಹಾಗೂ ನಿರೂಪಕ ರೆಹಮಾನ್ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಪಾಲ್ಗೊಂಡಿದ್ದು, ನವಜೋಡಿಗೆ ಶುಭಾಶಯ ತಿಳಿಸಿದ್ದಾರೆ.

ನೇಹಾ ಪಾಟೀಲ್ ಅವರು ಮನೆಯಲ್ಲಿ ನೋಡಿರುವ ಹುಡುಗನ ಜೊತೆ ವಿವಾಹವಾಗಿದ್ದು, ಹಿರಿಯರ ನಿಶ್ಚಯದ ಮೇರೆಗೆ ಕಳೆದ ಅಕ್ಟೋಬರ್ 19 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನೇಹಾ ಪಾಟೀಲ್-ಪ್ರಣವ್ ನಿಶ್ಚಿತಾರ್ಥ ನಡೆದಿತ್ತು.

ನೇಹಾ, ಸಂಕ್ರಾಂತಿ, ಸಂಯುಕ್ತ, ಸಿತಾರಾ, ವರ್ಧನ, ಟೈಟ್ಲು ಬೇಕಾ, ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅಷ್ಟೇ ಅಲ್ಲದೇ ಕಿರುತೆಯಲ್ಲೂ ನಟನೆ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಡ್ಯಾನ್ಸ್ ರಿಯಾಲಿಟಿ ಶೋನಲ್ಲೂ ನೇಹಾ ಪಾಟೀಲ್ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯಕ್ಕೆ ನೇಹಾ ನಾಲ್ಕು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದು, ಮದುವೆಯ ಬಳಿಕವೂ ಅಭಿನಯ ಮುಂದುವರಿಸಲು ನೇಹಾ ನಿರ್ಧರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv