ಟಾಲಿವುಡ್ ಅಂಗಳದಲ್ಲಿ ಸದ್ಯ ಕನ್ನಡತಿಯರ ಹವಾ ಜಾಸ್ತಿ ಆಗಿದೆ. ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾಗೆ (Sreeleela) ತೆಲುಗಿನಲ್ಲಿ ಭಾರೀ ಬೇಡಿಕೆಯಿದೆ. ಇವರ ನಡುವೆ ಕುಡ್ಲದ ಕುವರಿ ನೇಹಾ ಶೆಟ್ಟಿಗೆ ಬೇಡಿಕೆ ಕಮ್ಮಿಯಾಗಿದ್ಯಾ? ಎಂಬ ಗುಸು ಗುಸು ಶುರುವಾಗಿದೆ. ಹಾಗಾದ್ರೆ ಕರಾವಳಿ ನಟಿ ಕೈಯಲ್ಲಿ ಅದೆಷ್ಟು ಸಿನಿಮಾಗಳಿವೆ. ನೇಹಾ ಈಗ ಏನ್ಮಾಡ್ತಿದ್ದಾರೆ? ಇಲ್ಲಿದೆ ಮಾಹಿತಿ.
‘ಮುಂಗಾರು ಮಳೆ 2’ (Mungaru Male 2) ಚಿತ್ರದಿಂದ ಸಿನಿಮಾ ಕೆರಿಯರ್ ಶುರು ಮಾಡಿದ ಮಂಗಳೂರಿನ ಬೆಡಗಿ ನೇಹಾ ಶೆಟ್ಟಿ (Neha Shetty) ಸದ್ಯ ಟಾಲಿವುಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ನಾಯಕಿಯಾಗಿ ನಟಿ ನೇಹಾ ತೆಲುಗು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
ತೆಲುಗಿನ ಮೆಹಬೂಬಾ, ಗಲ್ಲಿ ಬಾಯ್, ಡಿಜೆ ಟಿಲ್ಲು ಚಿತ್ರಗಳ ಮೂಲಕ ಗಮನ ಸೆಳೆದ ನೇಹಾ ಶೆಟ್ಟಿಗೆ ಈಗ ಅವಕಾಶಗಳು ಕಮ್ಮಿಯಾಗಿದೆ. ಕೆರಿಯರ್‌ನಲ್ಲಿ ಬಿಗ್ ಬ್ರೇಕ್ ಸಿಗದೇ ನಟಿ ಕಂಗಾಲಾಗಿದ್ದಾರೆ. ಸದ್ಯ ತೆಲುಗಿನಲ್ಲಿ ಸೌಂಡ್ ಮಾಡುತ್ತಿರುವ ಹೆಸರು ಅಂದರೆ ರಶ್ಮಿಕಾ ಮಂದಣ್ಣ, ಶ್ರೀಲೀಲಾ. ನೇಹಾ ಶೆಟ್ಟಿ ಠಕ್ಕರ್ ಕೊಟ್ಟಿದ್ದಾರೆ. ಸ್ಟಾರ್ ನಟರ ಸಿನಿಮಾಗಳಿಗೆ ರಶ್ಮಿಕಾ ಅಥವಾ ಶ್ರೀಲೀಲಾನೇ ಬೇಕು ಅನ್ನುವಷ್ಟರ ಮಟ್ಟಿಗೆ ಅವರಿಗೆ ಬೇಡಿಕೆ ಇದೆ. ರಶ್ಮಿಕಾ ತೆಲುಗಿನ ಜೊತೆ ಬಾಲಿವುಡ್‌ನತ್ತ ಮುಖ ಮಾಡಿದ್ರೆ, ಶ್ರೀಲೀಲಾ ಕಾಲಿವುಡ್‌ನಲ್ಲಿ ಹೊಸ ಹೆಜ್ಜೆ ಇಡಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ:ಹೊಸ ಹುಡುಗಿ ಜೊತೆ ವರ್ಮಾ ನೈಟ್ ಪಾರ್ಟಿ
‘ಡಿಜೆ ಟಿಲ್ಲು’ (Dj Tillu) ಸಿನಿಮಾದಲ್ಲಿ ಸಿದ್ದು ಜೊತೆ ನೇಹಾ ಬೋಲ್ಡ್ ಆಗಿ ನಟಿಸಿದ್ದರು. ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ನಟಿ ಮೋಡಿ ಮಾಡಿದ್ದರು. ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾದಲ್ಲಿ ಗೆಸ್ಟ್ ರೋಲ್‌ನಲ್ಲಿ ನಟಿಸಿದ್ದಾರೆ. ಸದ್ಯ ‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾ ಬಿಟ್ಟು ಯಾವುದೇ ಹೊಸ ಚಿತ್ರವನ್ನು ನಟಿ ಒಪ್ಪಿಕೊಂಡಿಲ್ಲ. ಇದೇ ಮೇನಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ.
‘ಗ್ಯಾಂಗ್ಸ್ ಆಫ್ ಗೋದಾವರಿ’ ಚಿತ್ರದ ನಂತರ ನೇಹಾ ಶೆಟ್ಟಿ ಲಕ್ ಬದಲಾಗುತ್ತಾ? ಈ ಚಿತ್ರ ಮುಂಗಾರು ಮಳೆ 2 ನಟಿಯ ಕೈ ಹಿಡಿಯುತ್ತಾ? ಎಂದು ಕಾದುನೋಡಬೇಕಿದೆ.