‘ಗಟ್ಟಿಮೇಳ’ ಸೀರಿಯಲ್ ಖ್ಯಾತಿಯ ನಿಶಾ ರವಿಕೃಷ್ಣನ್ (Nisha Ravikrishnan) ಅವರು ಕನಸಿನ ಹೊಸ ಮನೆ ಗೃಹಪ್ರವೇಶ (House Warming) ಮಾಡಿದ ಸಂಭ್ರಮದಲ್ಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಿರುತೆರೆ ಕಲಾವಿದರು ಭಾಗಿಯಾಗಿ ಶುಭಕೋರಿದ್ದಾರೆ. ಇದನ್ನೂ ಓದಿ:ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ
View this post on Instagram
ಹಲವು ವರ್ಷಗಳಿಂದ ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿರುವ ನಿಶಾ ಅವರಿಗೆ ಚೆಂದದ ಮನೆ ಕಟ್ಟಿಸಬೇಕು ಎಂಬ ಕನಸಿತ್ತು. ಅದರಂತೆ ಮೇ 9ರಂದು ಶುಭ ಶುಕ್ರವಾರ ನಿಶಾ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗಣಪತಿ ಹೋಮ ಹಾಗೂ ಸತ್ಯನಾರಾಯಣ ಪೂಜೆ ಮಾಡಿಸಿ ಅದ್ಧೂರಿಯಾಗಿ ಗೃಹಪ್ರವೇಶ ಮಾಡಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಗೆ ದೇಣಿಗೆ ಘೋಷಿಸಿದ ವಿಜಯ್ ದೇವರಕೊಂಡ – ಫ್ಯಾನ್ಸ್ ಮೆಚ್ಚುಗೆ
View this post on Instagram
ಈ ಕಾರ್ಯಕ್ರಮದಲ್ಲಿ ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಣ್ಣಯ್ಯ’ ಸೀರಿಯಲ್ ತಂಡ ಕೂಡ ಭಾಗಿಯಾಗಿದ್ದರು. ನಟಿಗೆ ವಿಶ್ ಮಾಡಿದ್ದಾರೆ.
View this post on Instagram
‘ಸರ್ವ ಮಂಗಲ ಮಾಂಗಲ್ಯೆ’ ಸೀರಿಯಲ್‌ನಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದ ನಿಶಾ ಆ ನಂತರ ಗಟ್ಟಿಮೇಳ ಸೀರಿಯಲ್‌ನಲ್ಲಿ ನಾಯಕಿಯಾಗಿ ಮಿಂಚಿದ್ದರು. ‘ರೌಡಿ ಬೇಡಿ’ ಎಂದೇ ಫೇಮಸ್ ಆಗಿದ್ದರು. ಈಗ ‘ಅಣ್ಣಯ್ಯ’ ಸೀರಿಯಲ್‌ನಲ್ಲಿ ಪಾರ್ವತಿ ಹೆಸರಿನ ಡಾಕ್ಟರ್ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ತೆಲುಗಿನ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದಾರೆ.