ಮನೆಯ ಬಾಲ್ಕನಿಯಿಂದ ವೀಡಿಯೋ ಮಾಡಿ ಶೇರ್
ಬಾಲಿವುಡ್ ಬೆಡಗಿ ನೋರಾ ಫತೇಹಿ (Nora Fatehi) ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚಿನ (LosAngeles Wildfire) ಅವಘಡದಿಂದ ಪಾರಾಗಿದ್ದಾರೆ. ಸದ್ಯ ನಟಿ ಉಳಿದುಕೊಂಡಿದ್ದ ಜಾಗದಿಂದ ಸ್ಥಳಾಂತರವಾಗಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ. ಮನೆಯ ಬಾಲ್ಕನಿಯಿಂದ ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್ ನೇಮಕ
ನಾನು ಲಾಸ್ ಏಂಜಲೀಸ್‌ನಲ್ಲಿದ್ದೇನೆ. ನಾನು ಈ ರೀತಿಯ ಕಷ್ಟದ ಪರಿಸ್ಥಿತಿಯನ್ನು ಎಂದಿಗೂ ನೋಡಿಲ್ಲ. ಇಲ್ಲಿಂದ ಬೇರೆ ಕಡೆ ಶಿಫ್ಟ್ ಆಗಲು ಸೂಚನೆ ಬಂದಿತ್ತು. ಆದ್ದರಿಂದ ನಾನು ನನ್ನ ಎಲ್ಲಾ ವಸ್ತುಗಳನ್ನು ಪ್ಯಾಕ್ ಮಾಡಿ, ಇಲ್ಲಿಂದ ಬೇರೆ ಸ್ಥಳಕ್ಕೆ ಶಿಫ್ಟ್ ಆಗುತ್ತಿದ್ದೇನೆ. ಲಾಸ್ ಏಂಜಲೀಸ್‌ನಲ್ಲಿರುವ (Los Angles) ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಭಾವಿಸುತ್ತೇನೆ ಎಂದು ನೋರಾ ವಿಡಿಯೋದಲ್ಲಿ ಹೇಳಿದರು.
ಅಂದಹಾಗೆ, ಅಮೆರಿಕದ (America) ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ ನೀಡಿದ್ದಾರೆ.
ದುರ್ಘಟನೆಯಲ್ಲಿ ಈವರೆಗೆ ಐವರು ಸಜೀವ ದಹನವಾಗಿದ್ದಾರೆ. ಈ ನಡುವೆ 1,00,000 ಜನರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಸುಮಾರು 1,500 ಮನೆಗಳು ಸುಟ್ಟು ಭಸ್ಮವಾಗಿವೆ ಎಂದು ವರದಿಗಳು ತಿಳಿಸಿವೆ.
ಲಾಸ್ ಏಂಜಲೀಸ್‌ನಾದ್ಯಂತ ನಿಯಂತ್ರಣ ಮೀರಿದ ಕಾಡ್ಗಿಚ್ಚು ಉಲ್ಬಣಗೊಳ್ಳುತ್ತಿರುವುದರಿಂದ, ಸನ್‌ಸೆಟ್ ಫೈರ್ ಎಂದು ಕರೆಯಲ್ಪಡುವ ಹೊಸ ಜ್ವಾಲೆಯು ಹಾಲಿವುಡ್ ಹಿಲ್ಸ್‌ನಲ್ಲಿ ಕಾಣಿಸಿಕೊಂಡಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 112 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಸಾಂಟಾ ಅನಾ’ ಚಂಡಮಾರುತದಿಂದ ಪರಿಸ್ಥಿತಿ ಹದಗೆಡುತ್ತಲೇ ಇದೆ. ರನ್ಯಾನ್ ಕ್ಯಾನ್ಯನ್ ಮತ್ತು ವಾಟಲ್ಸ್ ಪಾರ್ಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.