ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ಸೆ.24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್ನಲ್ಲಿ ಅದ್ದೂರಿಯಾಗಿ ಮದುವೆ ನೆರವೇರಿದೆ. ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ಸಿಖ್ ಪದ್ಧತಿಯಂತೆ ಮದುವೆಯಾಗಿದ್ದಾರೆ. ಇದೀಗ ಪರಿಣಿತಿ (Parineeti Chopra) ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.
Advertisement
ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸೆ.24ರ ಸಂಜೆ 6:30ಕ್ಕೆ ಶುಭ ಮುಹೂರ್ತದಲ್ಲಿ ಹೊಸ ಬಾಳಿಗೆ ಈ ಜೋಡಿ ಕಾಲಿಟ್ಟಿದೆ.
Advertisement
Advertisement
ಸ್ಟಾರ್ ಮದುವೆಗೆಂದು ಲೀಲಾ ಪ್ಯಾಲೇಸ್ನನ್ನು (Leela Palace) ಭವ್ಯವಾಗಿ ಅಲಂಕರಿಲಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ – ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ವಿವಾಹದಲ್ಲಿ ಪಾಲ್ಗೊಂಡಿದ್ದರು.
Advertisement
ಪರಿಣಿತಿ-ರಾಘವ್ ಲೈಟ್ ಬಣ್ಣದ ಉಡುಗೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಿಂಪಲ್ ಜ್ಯುವೆಲ್ಲರಿ ಧರಿಸಿ ನಟಿ ಹೈಲೆಟ್ ಆಗಿದ್ದಾರೆ. ನವಜೋಡಿ ಧರಿಸಿರುವ ಉಡುಗೆಯನ್ನ ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿದ್ದಾರೆ. ಇದನ್ನೂ ಓದಿ:‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ಹೊಸ ಸಿನಿಮಾಗೆ ಇಂದು ಮುಹೂರ್ತ
ಪರಿಣಿತಿ ಮದುವೆಗೆ ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವರು ಭಾಗಿಯಾಗಿರೋದು ಹೈಲೆಟ್. ಮೇ ತಿಂಗಳಿನಲ್ಲಿ ಈ ಜೋಡಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ರು. ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತಿದ್ದರು.
ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿರುವ ನವ ಜೋಡಿಗೆ, ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಶುಭಕೋರಿದ್ದಾರೆ.