ನಿನ್ನೆಯಷ್ಟೇ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ. ಎಂಗೇಜ್ ಮೆಂಟ್ ಗಾಗಿ ಅವರು ದುಬಾರಿ ರಿಂಗ್ (Ring) ಖರೀದಿ ಮಾಡಿದ್ದು, ವಜ್ರಸಹಿತ ಉಂಗುರ ಅದಾಗಿದೆ ಎಂದು ವರದಿಯಾಗಿದೆ. ತಮ್ಮ ಬಾಳಸಂಗಾತಿಗೆ ನಿನ್ನೆ ಪರಿಣಿತಾ ಚೋಪ್ರಾ ತೊಡಿಸಿರುವ ರಿಂಗಿನ ಬೆಲೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ್ದು ಎಂದು ಹೇಳಲಾಗುತ್ತಿದ್ದು, ಅದು ಸಾಲಿಟೇರ್ ವಜ್ರದಿಂದ ನಿರ್ಮಾಣವಾಗಿದೆಯಂತೆ.
ಪರಿಣಿತಿ ಚೋಪ್ರಾ (Parineeti Chopra) ಹಾಗೂ ಸಂಸದ ರಾಘವ್ ಚಡ್ಡಾ (Raghav Chadha) ಎಂಗೇಜ್ ಮೆಂಟ್ (Engagement) ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಿಟೌನ್ ನಲ್ಲಿ ಹರಿದಾಡುತ್ತಿತ್ತು. ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿರುವ ವಿಷಯ ಈ ಸುದ್ದಿಗೆ ಪುಷ್ಠಿ ಕೊಟ್ಟಿತ್ತು. ಆದರೆ, ಅವರು ಈ ವಿಷಯವನ್ನು ನಿರಾಕರಿಸುತ್ತಲೇ ಬಂದಿದ್ದರು. ಇದೀಗ ಸದ್ದಿಲ್ಲದೇ ಎಂಗೇಜ್ ಮೆಂಟ್ ಕೂಡ ಮಾಡಿಕೊಂಡಿದ್ದಾರೆ.
ಈ ಜೋಡಿಯ ನಿಶ್ಚಿತಾರ್ಥ ಸಮಾರಂಭಂದಲ್ಲಿ ರಾಜಕೀಯ ಗಣ್ಯರು, ಸಿನಿ ತಾರೆಯರು ಹಾಗೂ ಕ್ರೀಡಾಪಟುಗಳ ಭಾಗಿಯಾಗಿದ್ದರು. ಪರಿಣಿತಿ ಸಹೋದರಿ ಪ್ರಿಯಾಂಕಾ ಚೋಪ್ರಾ, ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ಇಡೀ ಸಮಾರಂಭದಲ್ಲಿ ಮಿಂಚಿದ್ದಾರೆ. ದೆಹಲಿಯ (Delhi) ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್ ನಲ್ಲಿ ಪರಿಣಿತಿ ಚೋಪ್ರಾ ಹಾಗೂ ರಾಘವ್ ಉಂಗುರ ಬದಲಾಯಿಸಿಕೊಂಡಿದ್ದಾರೆ. ಇದನ್ನೂ ಓದಿ:ಬಂದೂಕಿನೊಂದಿಗೆ ಆಟವಾಡಿದ ‘ಬಿಗ್ ಬಾಸ್’ ಅಬ್ದು ರೋಜಿಕ್ ವಿರುದ್ಧ ಪ್ರಕರಣ ದಾಖಲು
ಸಂಪೂರ್ಣ ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬದಿಂದ 150 ಜನರಷ್ಟೇ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಪರಿಣಿತಿ, ಮನೀಷ್ ಮಲ್ಹೋತ್ರಾ ಬಳಿ ಸರಳವಾಗಿ ಡ್ರೆಸ್ ಮಾಡಿಸಿದ್ದರು. ರಾಘವ್, ಅವರ ಚಿಕ್ಕಪ್ಪ ಪವನ್ ಸಚ್‌ದೇವ್ ಬಳಿ ನಿಶ್ಚಿತಾರ್ಥಕ್ಕೆ ಔಟ್ ಫಿಟ್ ಡಿಸೈನ್ ಮಾಡಿಸಲಾಗಿತ್ತು.
ನಟಿ ಪರಿಣಿತಿ(Parineeti Chopra), ರಾಜಕಾರಣಿ ರಾಘವ್ ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ ದಂಪತಿ, ಆಲಿಯಾ ಭಟ್, ಕತ್ರಿನಾ ಕೈಫ್, ನಟ ಅಕ್ಷಯ್ ಕುಮಾರ್ ಸೇರಿದಂತೆ ಹಲವು ಸಿನಿಮಾ ಸ್ಟಾರ್‌ಗಳು, ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ಹರಿಯಾಣದಲ್ಲಿ ನಡೆದ ಶೂಟಿಂಗ್ ವೇಳೆ ಇಬ್ಬರೂ ಪರಿಚಯವಾಗಿ ಆನಂತರ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪೋಷಕರ ಒಪ್ಪಿಗೆ ಪಡೆದುಕೊಂಡೇ ಇಬ್ಬರೂ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ರಾಘವ್ ಚಡ್ಡಾ ಆಪ್ ಪಕ್ಷದಿಂದ ಎಂಪಿ ಆಗಿದ್ದರೆ, ಪರಿಣಿತಿ ಲೇಡಿಸ್ ವರ್ಸಸ್ ರಿಕ್ಕಿ ಬೇಲ್ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು ಈಗಲೂ ಸಿನಿಮಾ ರಂಗದಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ