ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ (Ustad Bhagat Singh) ಚಿತ್ರದ ಫಸ್ಟ್ ಟೀಸರ್ (Teaser) ನಿನ್ನೆ ರಿಲೀಸ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಟೀಸರ್ ನಲ್ಲಿ ಪವನ್ ಕಲ್ಯಾಣ್ ಹೊಡೆದ ಡೈಲಾಗ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಗಬ್ಬರ್ ಸಿಂಗ್ ರೀತಿಯಲ್ಲೇ ಈ ಸಿನಿಮಾ ಕೂಡ ಹಿಟ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಗಬ್ಬರ್ ಸಿಂಗ್ ನಂತರ ನಿರ್ದೇಶಕ ಹರೀಶ್ ಶಂಕರ್ ಮತ್ತು ಪವನ್ ಕಲ್ಯಾಣ್ ಒಟ್ಟಾಗಿರುವುದರಿಂದ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.
‘ಧರ್ಮಕ್ಕೆ ತೊಂದರೆಯಾದಾಗ, ಅಧರ್ಮ ಹೆಚ್ಚಾದ ಸಮಯದಲ್ಲಿ ನಾನು ಅವತಾರ ಎತ್ತಿ ಬರುತ್ತೇನೆ ಎನ್ನುವ ಶ್ರೀಕೃಷ್ಣನ ಮಾತನ್ನು ಅಳವಡಿಸಿ ಗ್ಲಿಂಪ್ಸ್ ಮಾಡಲಾಗಿದೆ. ನಂತರ ಪವನ್ ಕಲ್ಯಾಣ್ ಖಡಕ್ ಡೈಲಾಗ್ ಹೊಡೆಯುತ್ತಾರೆ. ಭಗತ್ ಸಿಂಗ್ ಪಾತಬಸ್ತಿ ಎನ್ನುವ ಶಬ್ದವೇ ಅಭಿಮಾನಿಗಳಿಗೆ ಕಿಕ್ ಕೊಡುತ್ತದೆ.
ಅಭಿಮಾನಿಗಳು ಪವನ್ ಕಲ್ಯಾಣ್ ಮ್ಯಾನರಿಸಂ ಮತ್ತು ಲುಕ್ ಗೆ ಫಿದಾ ಆಗಿದ್ದರೆ, ನಟಿ ಪೂನಂ ಕೌರ್ (Poonam Kaur) ಚಿತ್ರದ ಪೋಸ್ಟರ್ ಕಂಡು ಗರಂ ಆಗಿದ್ದಾರೆ. ಈ ಸಿನಿಮಾ ಟೀಮ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಗೆ ಅವಮಾನ ಮಾಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರನ ಹೆಸರಿನ ಮೇಲೆ ಪವನ್ ಕಲ್ಯಾಣ್ ಕಾಲಿಟ್ಟಿದ್ದಾರೆ ಎಂದು ನಟಿ ಕೋಪವನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:‘ಕಸ್ಟಡಿ’ ಸಿನಿಮಾ ತೆರೆಗೆ- ಕಾನ್ಸ್‌ಟೇಬಲ್ ಪಾತ್ರದಲ್ಲಿ ನಾಗ ಚೈತನ್ಯ
ನಟನ ಕಾಲ ಕೆಳಗೆ ಮಹಾತ್ಮನ ಹೆಸರು ಹಾಕಿರುವುದು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವಂಥದ್ದು ಅಲ್ಲ ಎಂದು ಪೂನಂ ಕಾಮೆಂಟ್ ಮಾಡುತ್ತಿದ್ದಂತೆಯೇ ಪರ ವಿರೋಧದ ಕಾಮೆಂಟ್ ಗಳು ರಾಶಿ ರಾಶಿ ಬಿದ್ದಿವೆ. ಪವನ್ ಕಲ್ಯಾಣ್ ಫ್ಯಾನ್ಸ್ ಪೂನಂ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಸಿನಿಮಾವನ್ನು ಸಿನಿಮಾ ರೀತಿಯಲ್ಲೇ ನೋಡಿ ಎಂದು ತಿರುಗೇಟು ನೀಡಿದ್ದಾರೆ.