ಬಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ಫೋಟೋಶೂಟ್‌ವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಪ್ರೆಗ್ನೆನ್ಸಿ ಸುದ್ದಿಯನ್ನು ತಿಳಿಸಿದ್ದಾರೆ.

View this post on Instagram
ಅಂದಹಾಗೆ, ಲಾಕ್‌ಡೌನ್ ವೇಳೆ 2021ರಲ್ಲಿ ಉದ್ಯಮಿ ನಿತಿನ್ ರಾಜು (Nithin) ಜೊತೆ ಪ್ರಣಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 2022ರ ಜೂನ್‌ನಲ್ಲಿ ಹೆಣ್ಣು ಮಗವಿಗೆ ನಟಿ ಜನ್ಮ ನೀಡಿದ್ದಾರೆ. ಈಗ 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ.
ಇನ್ನೂ ಕಡೆಯದಾಗಿ ಕನ್ನಡದ ‘ರಾಮನ ಅವತಾರ’ ಎಂಬ ಸಿನಿಮಾದಲ್ಲಿ ಪ್ರಣಿತಾ ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

