ಬಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಅವರು ಕಾನ್ ಫಿಲ್ಮ್ ಫೆಸ್ಟಿವಲ್‌ನ (78th Cannes Film Festival) ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕಿದ್ದಾರೆ. ನಟಿಯ ಸುಂದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾನ್ ಫಿಲ್ಮ್ ಫೆಸ್ಟಿವಲ್‌ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ. ಈ ಸಿನಿಮಾ ಹಬ್ಬದಲ್ಲಿ ಕನ್ನಡದ ನಟಿ ಪ್ರಣಿತಾ ಸುಭಾಷ್ ಕೂಡ ಭಾಗಿಯಾಗಿದ್ದಾರೆ. ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾನ್ ಚಲನಚಿತ್ರೋತ್ಸವದಲ್ಲಿ ಮೂರು ಬಗೆಯ ಡಿಫರೆಂಟ್ ಧಿರಿಸಿನಲ್ಲಿ ಮಿಂಚಿದ್ದಾರೆ. ಬೇಬಿ ಪಿಂಕ್ ಡ್ರೆಸ್, ರೆಡ್ ಕಲರ್ ಡ್ರೆಸ್ ಮತ್ತು ಸೀರೆಯಲ್ಲಿ ಅವರು ಕಂಗೊಳಿಸಿದ್ದಾರೆ.
ಅದರಲ್ಲೂ ಕಾನ್‌ನಲ್ಲಿ ಪಿಂಕ್ ಡ್ರೆಸ್ ಜೊತೆ ನಟಿ ಧರಿಸಿದ್ದ ದುಬಾರಿ ವಾಚ್ ಎಲ್ಲರ ಗಮನ ಸಳೆದಿದೆ. ಆ ವಾಚ್ ಬೆಲೆ 75 ಸಾವಿರದಿಂದ 1 ಲಕ್ಷ ರೂ. ಎನ್ನಲಾಗಿದೆ. ಈ ವಾಚ್ ಬೆಲೆ ಕೇಳಿ ಫ್ಯಾನ್ಸ್ ದಂಗಾಗಿದ್ದಾರೆ. ಇದನ್ನೂ ಓದಿ:ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ ಬಗ್ಗೆ ನಟಿ ಮಾತನಾಡಿ, ಕಾನ್ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಬೇಕು ಎಂದು ಚಿಕ್ಕ ವಯಸ್ಸಿನಲ್ಲಿ ಕಾಣುತ್ತಿದ್ದ ಕನಸು ಈಗ ನನಸಾಗಿದೆ. ಆ ಮಟ್ಟಕ್ಕೆ ಭಾರತೀಯ ಸಿನಿಮಾಗಳು ಮನ್ನಣೆ ಗಳಿಸಿವೆ ಎಂದಿದ್ದಾರೆ. ಇದನ್ನೂ ಓದಿ:ಎಲ್ಲಾ ಸಂದರ್ಭಕ್ಕೂ ನಗುವೇ ಒಳ್ಳೆಯ ಉತ್ತರ – ದರ್ಶನ್ ಭೇಟಿ ಬಳಿಕ ಪವಿತ್ರಾ ಪೋಸ್ಟ್!
78ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 13ರಿಂದ ಆರಂಭಗೊಂಡಿದ್ದು, 24ರ ವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಫಿಲ್ಮ್ ಫೆಸ್ಟಿವಲ್ ಟೀಮ್ ಅಳೆದು ತೂಗಿ ಕೆಲವೇ ಕೆಲವು ತಾರೆಯರಿಗೆ ಮಾತ್ರ ಆಮಂತ್ರಣ ನೀಡುತ್ತಾರೆ. ದೇಶ ವಿದೇಶದ ಕಲಾವಿದರಿಗೆ ಆಹ್ವಾನಿಸುತ್ತಾರೆ. ಈ ಕಾರ್ಯಕ್ರಮಕ್ಕೆ ನಟಿ ಪ್ರಣಿತಾ ಕೂಡ ಭಾಗಿಯಾಗಿದ್ದಾರೆ.
View this post on Instagram
ಈ ಸಿನಿಮಾ ಹಬ್ಬದಲ್ಲಿ ಐಶ್ವರ್ಯಾ ರೈ (Aishwarya Rai), ಜಾನ್ವಿ ಕಪೂರ್, ಆದಿತಿ ರಾವ್ ಹೈದರಿ, ಕನ್ನಡದ ನಟಿ ದಿಶಾ ಮದನ್ (Disha Madan) ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.