ಬೆಂಗಳೂರು: ಕಿರುತೆರೆ ಜನಪ್ರಿಯ ನಟಿ ಪ್ರಿಯಾಂಕಾ ಚಿಂಚೋಳಿ, ಉದ್ಯಮಿ ರಾಕೇಶ್ ಅವರೊಂದಿಗೆ ಇಂದು ಕುಟುಂಬದವರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿದ್ದಾರೆ.
ಕಳೆದ ಫೆಬ್ರವರಿ 14 ರಂದು ಪ್ರೇಮಿಗಳ ದಿನಾಚರಣೆಯಂದು ರಾಕೇಶ್ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಿಯಾಂಕಾ ಚಿಂಚೋಳಿ, ಆಗಸ್ಟ್ 14ರಂದು ಸರಳವಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡಿದ್ದರು. ಇದೀಗ ಅಮೇರಿಕಾದಿಂದ ಮದುವೆಗಾಗಿ ಭಾರತಕ್ಕೆ ಬಂದಿರುವ ರಾಕೇಶ್ ಅವರು ಪ್ರಿಯಾಂಕ ಜೊತೆ ಇಂದು ಸಂಪ್ರದಾಯಿಕವಾಗಿ ಕುಟುಂಬ ಮತ್ತು ಆಪ್ತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಫೋಟೋ ತೆಗೆಯುವಾಗ ಪುರುಷರು ಯಾಕೆ ತುಂಬಾ ಕಷ್ಟಪಡುತ್ತಾರೆ?: ರಾಧಿಕಾ ಪಂಡಿತ್
View this post on Instagram
ರಾಕೇಶ್ ಅವರು ಅಮೆರಿಕಾದ ಪ್ರತಿಷ್ಠಿತ ಬ್ಯಾಂಕ್ ಒಂದರಲ್ಲಿ ಉಪಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದು, 4 ತಿಂಗಳ ಬಳಿಕ ಮತ್ತೆ ವಿದೇಶಕ್ಕೆ ಹಾರಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಪ್ರಿಯಾಂಕಾ ಚಿಂಚೋಳಿ ಅವರ ಮನೆಯಲ್ಲಿ ನಡೆದ ಮೆಹಂದಿ ಶಾಸ್ತ್ರದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ
ಈ ಮುನ್ನ ಪ್ರಿಯಾಂಕ ಚಿಂಚೋಳಿ ಅವರು, ರಾಕೇಶ್ ಅವರು ಅಮೆರಿಕದ ಬ್ಯಾಂಕ್ ಒಂದರಲ್ಲಿ ಉಪಾಧ್ಯರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಆತಂಕವಿರುವ ಕಾರಣದಿಂದಾಗಿ ವೀಸಾಗೆ ಸಂಬಂಧಿಸಿದಂತೆ ರಿಜಿಸ್ಟರ್ ಮದುವೆಯ ಪ್ರಮಾಣಪತ್ರದ ಅಗತ್ಯವಿದೆಯಂತೆ. ಹೀಗಾಗಿ ರಿಜಿಸ್ಟರ್ ಮದುವೆಯಾಗಿದ್ದು, ಡಿಸೆಂಬರ್ 10-11ರಂದು ಸಾಂಪ್ರದಾಯಿಕವಾಗಿ ಬೆಂಗಳೂರಿನಲ್ಲೇ ಮದುವೆಯಾಗಲಿದ್ದೇವೆ ಎಂದು ತಿಳಿಸಿದ್ದರು. ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡ ನಟಿ ಪ್ರಿಯಾಂಕಾ ಚಿಂಚೋಳಿ
View this post on Instagram
ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹರ ಹರ ಮಹಾದೇವ ಧಾರವಾಹಿಯಲ್ಲಿ ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರಸ್ತುತ ಮತ್ತೊಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೈ ಹನುಮಾನ್ ಮತ್ತು ಮನಸಾರೆ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ ಜೊತೆಗೆ ರಾಗ ಎಂಬ ಧಾರವಾಹಿಯಲ್ಲಿ ಕೂಡ ನಟಿಸುತ್ತಿದ್ದಾರೆ.