ನವರಾತ್ರಿಯು (Navaratri) ದುರ್ಗಾ ದೇವಿಗೆ ಸಮರ್ಪಿತವಾದ ಮಂಗಳಕರ ಹಿಂದೂ ಹಬ್ಬವಾಗಿದೆ. ಇದು ಒಂಬತ್ತು ರಾತ್ರಿಗಳ ಸಾಂಕೇತಿಕ ಆಚರಣೆಯಾಗಿದೆ ಮತ್ತು ಉತ್ತರ ಮತ್ತು ಪೂರ್ವ ಭಾರತದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಇನ್ನೂ ಕನ್ನಡ ಚಿತ್ರರಂಗದ ತಾರೆಯರು ಕೂಡ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅದರಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಮನೆಯಲ್ಲೂ ‘ನವ’ರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಚೆಂದದ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ:ವಕೀಲ್ ಸಾಬ್ ಗೆಟಪ್‌ನಲ್ಲಿ ರಾಕಿ ಭಾಯ್- ಇದು ‘ಟಾಕ್ಸಿಕ್’ ಚಿತ್ರದಲ್ಲಿನ ಯಶ್ ಕ್ಯಾರೆಕ್ಟರ್?
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನವರಾತ್ರಿ ಹಬ್ಬವನ್ನು ಆಚರಣೆಯನ್ನು ಸರಳವಾಗಿ ಪ್ರಿಯಾಂಕಾ (Priyanka) ಆಚರಿಸಿದ್ದಾರೆ. ಆಚರಣೆಯ ಕೆಲ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ಇದು ಅಭಿಮಾನಿಗಳ ಗಮನ ಸೆಳೆದಿದೆ.
View this post on Instagram
ಸಾಂಪ್ರದಾಯಿಕ ಲುಕ್‌ನಲ್ಲಿ ಲೈಟ್ ಬಣ್ಣ ಸೀರೆಯುಟ್ಟು ನಟಿ ಮಿಂಚಿದ್ದಾರೆ. ದೀಪ ಮತ್ತು ಶಂಕವಿಟ್ಟಿರುವ ಬೆಳ್ಳಿ ತಟ್ಟೆಯನ್ನು ಹಿಡಿದು ನಿಂತಿರುವ ಕೆಲ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಪ್ರತಿ ಹಬ್ಬವನ್ನು ಕೂಡ ನಟಿ ಮನೆಯಲ್ಲಿ ಆಚರಿಸುತ್ತಾರೆ. ಸದ್ಯ ಈ ಫೋಟೋ ನೋಡಿ ಅಭಿಮಾನಿಗಳು ನವರಾತ್ರಿ ಹಬ್ಬಕ್ಕೆ ನಟಿಗೆ ಶುಭಕೋರಿದ್ದಾರೆ.
ಅಂದಹಾಗೆ, ನವರಾತ್ರಿ ಆಚರಣೆಯ ಹಿಂದೆ ಹಲವು ವಿಚಾರಗಳಿವೆ. ದಂತಕಥೆಯ ಪ್ರಕಾರ, ದುರ್ಗಾ ದೇವಿಯು ಮಹಿಷಾಸುರ ಎಂಬ ರಾಕ್ಷಸನೊಂದಿಗೆ ಒಂಬತ್ತು ದಿನಗಳ ಕಾಲ ಹೋರಾಡಿದಳು ಮತ್ತು ನಂತರ ನವಮಿಯ ರಾತ್ರಿ ಅವನನ್ನು ಕೊಂದಳು ಎಂದು ಕಥೆಯಲ್ಲಿ ಹೇಳಲಾಗಿದೆ. ಅಂದಿನಿಂದ ದೇವಿಯನ್ನು ‘ಮಹಿಷಾಸುರಮರ್ದಿನಿ’ ಎಂದು ಕರೆಯುತ್ತಾರೆ. ಅಂದಿನಿಂದ, ತಾಯಿ ದುರ್ಗೆಯ ಶಕ್ತಿಗೆ ಸಮರ್ಪಿತವಾದ ನವರಾತ್ರಿಯ ಉಪವಾಸವನ್ನು ಆಚರಿಸುವಾಗ ಅವಳ 9 ರೂಪಗಳನ್ನು ಪೂಜಿಸಲಾಗುತ್ತದೆ.