ರಾಜನನ್ನು ರಾಜನ ಥರ ನೋಡೋಕೆ ಇಷ್ಟ: ದರ್ಶನ್ ಸ್ಥಿತಿ ಕಂಡು ರಚಿತಾ ರಾಮ್ ಭಾವುಕ

Public TV
1 Min Read
rachita ram 2

ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ರನ್ನು (Darshan) ರಚಿತಾ ರಾಮ್ (Rachita Ram) ಭೇಟಿಯಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜನನ್ನು ರಾಜನ ಥರ ನೋಡೋಕೆ ಇಷ್ಟ ಎಂದು ನಟಿ ಭಾವುಕರಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಕೇಸ್ – ದರ್ಶನ್ A1 ಆರೋಪಿ?

rachita ram 1

ದರ್ಶನ್ ಸರ್ ಆರೋಗ್ಯವಾಗಿದ್ದಾರೆ. ಜೈಲಿನಲ್ಲಿ ಅವರನ್ನು ಹಾಗೇ ನೋಡೋಕೆ ಕಷ್ಟ ಆಗುತ್ತಿದೆ. ಎಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಅವರಿಗೆ ಹೇಳಿ ಬಿಟ್ಟು ಬಂದೆ ನಾವೆಲ್ಲರೂ ನಿಮ್ಮ ಬರುವಿಕೆಗಾಗಿ ಕಾಯ್ತಿದ್ದೇವೆ. ಪ್ಲೀಸ್ ಬೇಗ ಬನ್ನಿ ಅಂತ. ನನಗೆ ಕಾನೂನು ಮೇಲೆ ನಂಬಿಕೆ ಇದೆ. ದರ್ಶನ್ ಸರ್ ಆದಷ್ಟು ಬೇಗ ಹೊರಗೆ ಬರುತ್ತಾರೆ ಎಂದು ನಂಬಿಕೆ ಇದೆ ಎಂದು ರಚಿತಾ ರಾಮ್ ಮಾತನಾಡಿದ್ದಾರೆ.

ರಾಜನನ್ನು ರಾಜನ ಥರನೇ ನನಗೆ ನೋಡೋಕೆ ಇಷ್ಟ. ಇವತ್ತು ಅವರನ್ನು ನೋಡಿ ನಿರಾಳವಾಯ್ತು ಎಂದು ನಟಿ ಭಾವುಕರಾಗಿದ್ದಾರೆ. ಅವರು ಅಲ್ಲಿ ಆರೋಗ್ಯವಾಗಿ ಆರಾಮ ಆಗಿ ಇದ್ದಾರೆ. ನಾನು ಅವರ ಬ್ಯಾನರ್‌ನಿಂದ ಪರಿಚಯ ಆದವಳು. ನನಗೆ ಇವತ್ತು ಏನೇ ಹೆಸರು ಇದ್ದರೂ ಅದು ಅವರಿಂದ ಸಿಕ್ಕಿದೆ. ಅವರು ಅವತ್ತು ಒಪ್ಪಿಕೊಂಡಿದಕ್ಕೆ ನಾನು ಬಿಂದ್ಯಾ ರಾಮ್‌ನಿಂದ ರಚಿತಾ ರಾಮ್ ಆಗಿ ಬೆಳೆದಿದ್ದು. ನಾನು ಯಾವಗಲೂ ಅವರ ಕುಟುಂಬಕ್ಕೆ ಆಭಾರಿಯಾಗಿರುತ್ತೇನೆ. ಅವರನ್ನು ನೋಡಿ ನಾನೇ ಕಣ್ಣೀರಿಟ್ಟೆ ಆದರೆ ಅವರೇ ನನಗೆ ಸಮಾಧಾನ ಮಾಡಿದರು. ಅವರು ಆದಷ್ಟು ಬೇಗ ಹೊರಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಚಿತಾ ರಾಮ್ ಮಾತನಾಡಿದ್ದಾರೆ.

Share This Article