ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್, ಜನಪ್ರಿಯ ನಟಿ ರಚಿತಾ ರಾಮ್ (Rachita Ram) ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ (Koragajja Daiva) ಹರಕೆ ಕೋಲ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಇದನ್ನೂ ಓದಿ: ಬಡ ಹಿಂದೂ ಮಹಿಳೆ ಪರ ನೆರವು ಕೇಳಿದ ಮುಸ್ಲಿಂ ಮಹಿಳೆಯರು – ಉಡುಪಿಯಲ್ಲಿ ಅಪರೂಪದ ಘಟನೆ
ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್‌ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿರುವ ರಚಿತಾ ರಾಮ್ ಸದ್ಯ ಧ್ರುವ ಸರ್ಜಾ ಜೊತೆ ಕ್ರಿಮಿನಲ್, ನಿನಾಸಂ ಸತೀಶ್ ಜೊತೆ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದು, ತಮಿಳಿನಲ್ಲಿ ದೊಡ್ಡ ನಿರ್ಮಾಣ ಸಂಸ್ಥೆ ಜೊತೆ ಮಾತುಕತೆ ನಡೆದಿದೆ. ತೆಲುಗಿನಲ್ಲಿ ಎರಡು ಸಿನಿಮಾಗಳು ಈ ತಿಂಗಳಲ್ಲಿ ಅನೌನ್ಸ್ ಆಗಲಿದೆ.

