ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ರಾಧಿಕಾ ಪಂಡಿತ್ (Radhika Pandit) ಸದ್ಯ ಚಿತ್ರರಂಗದಿಂದ ದೂರ ಸರಿದಿದ್ದರು ಕೂಡ ಅವರ ಮೇಲಿನ ಕ್ರೇಜ್ ಅಭಿಮಾನಿಗಳಿಗೆ ಇನ್ನೂ ಕಮ್ಮಿಯಾಗಿಲ್ಲ. ಮದುವೆ, ಸಂಸಾರ, ಮಕ್ಕಳು ಅಂತಾ ಬ್ಯುಸಿಯಿದ್ದರು ಕೂಡ ಅಭಿಮಾನಿಗಳ ಜೊತೆ ಸದಾ ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕದಲ್ಲಿದ್ದಾರೆ. ಮಾರ್ಚ್ 7ರಂದು ರಾಧಿಕಾ ಹುಟ್ಟುಹಬ್ಬದ (Birthday) ಪ್ರಯುಕ್ತ, ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್‌ಗೆ (Fans) ಸಂದೇಶ ನೀಡಿದ್ದಾರೆ.
ಪ್ರತಿ ವರ್ಷ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ದಿನದಂದು ಮನೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಾರೆ. ಹಾಗಾಗಿ ಈ ಬಾರಿ ಮುಂಚಿತವಾಗಿಯೇ ತಾವು ಮನೆಯಿಂದ ದೂರ ಇರುವ ವಿಚಾರವನ್ನ ತಿಳಿಸಿದ್ದಾರೆ. ದೂರದ ಊರಲ್ಲಿ ಬರ್ತ್‌ಡೇ ಆಚರಿಸಿಕೊಳ್ಳುವುದಾಗಿ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ಬರ್ತ್‌ಡೇ ಆಚರಿಸಿಕೊಳ್ಳಲಿದ್ದೇನೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಬಹುದು ಎಂಬುದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್ ಮಾಡಿದ್ದೇನೆ. ಆ ಮೂಲಕ ನಿಮ್ಮ ಜೊತೆ ಸಂಪರ್ಕದಲ್ಲಿ ಇರಬಹುದು ಎಂದು ರಾಧಿಕಾ ಪಂಡಿತ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರೆಗ್ನೆನ್ಸಿ ಸುದ್ದಿ ಹಬ್ಬಿಸಿದವರಿಗೆ ಖಡಕ್ ಉತ್ತರ ಕೊಟ್ಟ ವಿದ್ಯಾ ಬಾಲನ್
View this post on Instagram
ರಾಧಿಕಾ ಪಂಡಿತ್ ಹಂಚಿಕೊಂಡಿರುವ ಈ ಪೋಸ್ಟ್‌ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮುಂಚಿತವಾಗಿ ಎಲ್ಲರೂ ಬರ್ತ್‌ಡೇ (Birthday) ವಿಶ್ ತಿಳಿಸುತ್ತಿದ್ದಾರೆ. ರಾಧಿಕಾ ಎಲ್ಲಿಗೆ ತೆರಳುತ್ತಿದ್ದಾರೆ ಎಂಬುದು ಸದ್ಯಕ್ಕೆ ರಿವೀಲ್ ಆಗಿಲ್ಲ. ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಅನೇಕ ಕಡೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ.