Tuesday, 15th October 2019

Recent News

ಮದುವೆಯಾದ ಬಳಿಕ ಮೊದಲ ಬಾರಿಗೆ ಬಣ್ಣ ಹಚ್ಚಲಿದ್ದಾರೆ ನಟಿ ರಾಧಿಕಾ ಪಂಡಿತ್-ಹೀರೋ ಯಾರು ಗೊತ್ತಾ?

ಬೆಂಗಳೂರು: ಸ್ಯಾಂಡಲ್ ವುಡ್ ನ ನಟಿ, ನಟ ಯಶ್‍ನ ಮುದ್ದಿನ ಮಡದಿ ರಾಧಿಕಾ ಪಂಡಿತ್ ಮದುವೆ ನಂತರ ಮೊದಲ ಬಾರಿಗೆ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಧಿಕಾ ಪಂಡಿತ್ ಜೊತೆ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ನಟನಾಗಿ ಅಭಿನಯಿಸುತ್ತಿದ್ದಾರೆ. ಇಂದು ಸಿನಿಮಾ ಮುಹೂರ್ತ ನಡೆಯಲಿದ್ದು, ವಿ. ಪ್ರಿಯಾ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಜೊತೆ ಸಹಾಯಕರಾಗಿ ಕೆಲಸ ಮಾಡಿರುವ ಪ್ರಿಯಾ ಈಗಾಗಲೇ ಮೂರು ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿ ಬಂದಿದ್ದಾರೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ತಾರಾ, ಸುಚೇಂದ್ರ ಪ್ರಸಾದ್ ಕೂಡ ನಟಿಸುತ್ತಿದ್ದು, ಸಿನಿಮಾದಲ್ಲಿ ಪ್ರೀತಂ ಜಯರಾಂ ಅವರ ಛಾಯಾಗ್ರಹಣ ಇರುತ್ತದೆ. ಡಿಸೆಂಬರ್ 11 ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.

ರಾಧಿಕಾ ಪಂಡಿತ್ ಅವರ ಈ ಸಿನಿಮಾ ಮಹಿಳಾ ಪ್ರಧಾನ ಚಿತ್ರವಾಗಿಲ್ಲ. ಅವರ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ ಹೀರೋ ಪಾತ್ರಕ್ಕೂ ಅಷ್ಟೇ ಪ್ರಾಮುಖ್ಯತೆ ಇದೆಯಂತೆ. ಚಿತ್ರದ ಟೈಟಲ್ ಇನ್ನು ಬಹಿರಂಗ ಆಗಿಲ್ಲ. ರಾಧಿಕಾ ಪಂಡಿತ್ ಮದುವೆಯ ಸಂದರ್ಭದಲ್ಲಿ `ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ವರ್ಷದ ಬಳಿಕ ಮತ್ತೆ ರಾಧಿಕಾ ಪಂಡಿತ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕಥೆ ತುಂಬ ಇಷ್ಟ ಆಗಿದ್ದು, ರಾಧಿಕಾ ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *