ಮುದ್ದಾದ ಮಗುವಿಗೆ ನಾಮಕರಣ ಮಾಡಿದ ರಾಧಿಕಾ ರಾವ್

Public TV
1 Min Read
radhika rao

ಕಿರುತೆರೆಯ ನಟಿ ರಾಧಿಕಾ ರಾವ್ (Radhika Rao) ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಕೆಲ ತಿಂಗಳುಗಳ ಹಿಂದೆ ರಾಧಿಕಾ, ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮುದ್ದಾದ ಮಗುವಿಗೆ ರಾಧಿಕಾ ನಾಮಕರಣ ಮಾಡಿದ್ದಾರೆ. ಚೆಂದದ ಫೋಟೋಶೂಟ್ ಶೇರ್ ಮಾಡಿಕೊಳ್ಳುವ ಮೂಲಕ ಮಗನ ಹೆಸರನ್ನ ನಟಿ ರಿವೀಲ್ ಮಾಡಿದ್ದಾರೆ.

radhika rao 1ಜುಲೈನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಧಿಕಾ ರಾವ್ (Radhika Rao) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮಗುವಿನ ಚೆಂದದ ಫೋಟೋ ಶೇರ್ ಮಾಡಿದ್ದಾರೆ. ಮಗನಿಗೆ ‘ಅಗಸ್ತ್ಯ’ ಎಂದು ನಾಮಕರಣ ಮಾಡಿದ್ದಾರೆ.

radhika rao 2ನಟಿ ರಾಧಿಕಾ ರಾವ್ ಅವರು 2020ರಲ್ಲಿ ಆಕರ್ಷ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದ ರಾಧಿಕಾ ಮತ್ತು ಆಕರ್ಷ್ ಭಟ್, ಪ್ರೀತಿಸಲು ಆರಂಭಿಸಿದ್ದರು. ಇಬ್ಬರ ಮನೆಯಲ್ಲೂ ಲವ್ ವಿಚಾರ ತಿಳಿಸಿ ಕುಟುಂಬದವರ ಸಮ್ಮತಿ ಪಡೆದು ಮದುವೆ ಆಗಿದ್ದರು. ಇದನ್ನೂ ಓದಿ:2ನೇ ಮದುವೆ ಬಗ್ಗೆ ಮಾತಾಡಿದ ನಟಿ ಸಮಂತಾ

‘ಮಂಗಳೂರ್ ಹುಡ್ಗಿ ಹುಬ್ಬಳ್ಳಿ ಹುಡ್ಗ’, ರಾಧಾ ಕಲ್ಯಾಣ (Radha Kalyana) ಸೀರಿಯಲ್, ಸಾಕಷ್ಟು ತುಳು ಮತ್ತು ಕನ್ನಡ ಸಿನಿಮಾಗಳಲ್ಲಿ ರಾಧಿಕಾ ನಟಿಸಿದ್ದಾರೆ. ಮದುವೆ, ಸಂಸಾರ ಎಂದು ಬಣ್ಣದ ಲೋಕದಿಂದ ದೂರ ಸರಿದಿದ್ದ ನಟಿ ಮತ್ತೆ ನಟನೆಗೆ ಕಮ್‌ಬ್ಯಾಕ್ ಆಗುವ ಬಗ್ಗೆ ಮುನ್ಸೂಚನೆ ಕೊಟ್ಟಿದ್ದಾರೆ. ಸೂಕ್ತ ಕಥೆ ಸಿಕ್ಕರೆ ಯಾವ ಭಾಷೆಯಾದ್ರೂ ನಟಿಸೋದಾಗಿ ತಿಳಿಸಿದ್ದಾರೆ.

Share This Article