– ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ವಿತರಣೆ
ಬೆಂಗಳೂರು: ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ನಿರಾಶ್ರಿತರಿಗೆ, ಬಡವರಿಗೆ ಆಹಾರ ಪದಾರ್ಥ, ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ನೀಡುವ ಮೂಲಕ ನೆರವಾಗುತ್ತಿದ್ದಾರೆ.
Advertisement
ತಮ್ಮ ಆರ್‍ಡಿ(ರಾಗಿಣಿ ದ್ವಿವೇದಿ) ಫೌಂಡೇಶನ್ ವತಿಯಿಂದ ರಾಗಿಣಿ ದ್ವಿವೇದಿ ಸಿನಿಮಾ ರಂಗದ ಕೂಲಿ ಕಾರ್ಮಿಕರಿಗೆ, ತಂತ್ರಜ್ಞರಿಗೆ ನೆರವು ನೀಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ನೂರು ಡ್ಯಾನ್ಸರ್ಸ್, 40 ಸ್ಲಮ್ ಏರಿಯಾಗಳಲ್ಲಿರುವ ಬಡವರಿಗೆ ದವಸ-ಧಾನ್ಯ ವಿತರಣೆ ಮಾಡುತ್ತಿದ್ದಾರೆ. ಮಾಜಿ ಮೇಯರ್ ಪದ್ಮಾವತಿ ಜೊತೆ ಸೇರಿ ಅನ್ನದಾಸೋಹ ಮತ್ತು ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನು ಸಹ ವಿತರಣೆಯನ್ನು ಮಾಡಿದ್ದಾರೆ.
Advertisement
Advertisement
ಕೆಲ ಮಹಿಳಾ ಹಾಸ್ಟೆಲ್‍ಗಳಿಗಳಲ್ಲಿರುವ ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ಗಳನ್ನು ವಿತರಿಸುವ ಮೂಲಕ ಮಹಿಳೆಯರ ಸಹಾಯಕ್ಕೂ ರಾಗಿಣಿ ನಿಂತಿದ್ದಾರೆ. ಲಾಕ್‍ಡೌನ್ ಆದಾಗಿನಿಂದಲೂ ಬಡವರಿಗೆ, ನಿರಾಶ್ರಿತರಿಗೆ ರಾಗಿಣಿ ಸಹಾಯ ಮಾಡುತ್ತಿದ್ದು, ಹಲವು ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಕೊರೊನಾ ವಾರಿಯರ್ಸ್‍ಯಿಂದ ಹಿಡಿದು ಬಡ ಜನರ ವರೆಗೆ ರಾಗಿಣಿ ಸಹಾಯ ಮಾಡುತ್ತಿದ್ದಾರೆ.
Advertisement
ಈ ಹಿಂದೆ ಕೊರೊನಾ ವಾರಿಯರ್ಸ್ ಗಳಾದ ವೈದ್ಯರು, ಪೊಲೀಸ್, ಪೌರ ಕಾರ್ಮಿಕರಿಗೆ ಊಟ ವಿತರಿಸಿದ್ದಾರೆ. ಹಲವು ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಸ್ವತಃ ಅವರೇ ಆಹಾರದ ಕಿಟ್ ವಿತರಿಸಿದ್ದಾರೆ. ಈ ಮೂಲಕ ಬಡವರ ಸಹಾಯಕ್ಕೆ ನಿಂತಿದ್ದಾರೆ. ಇಷ್ಟು ಮಾತ್ರವಲ್ಲದೆ ಬೀದಿ ನಾಯಿಗಳು, ಪ್ರಾಣಿಗಳಿಗೂ ರಾಗಿಣಿ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ಮಹಿಳೆಯರಿಗೆ, ಡ್ಯಾನ್ಸರ್ಸ್‍ಗೆ ಹಾಗೂ ಸ್ಲಂ ನಿವಾಸಿಗಳಿಗೆ ನೆರವಾಗುತ್ತಿದ್ದಾರೆ.
ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ರೀಲ್ ಜೀವನವನ್ನು ನಾವು ತುಂಬಾ ಇಷ್ಟಪಡುತ್ತೇವೆ. ಅಂತೆಯೇ ಇದೀಗ ರಿಯಲ್ ಜೀವನ ತುಂಬಾ ಅಪ್ಯಾಯಮಾನವಾಗಿದ್ದು, ಇದಕ್ಕೆ ಗೌರವ ಸಲ್ಲಿಸುತ್ತೇವೆ ಎಂದು ಕಮೆಂಟ್ ಮಾಡಿದ್ದಾರೆ. ಹಲವರು ಇದೇ ರೀತಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.
ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ತಮ್ಮ ಸಿನಿಮಾಗಳ ಅಪ್‍ಡೇಟ್ ಜೊತೆಗೆ ಅಡುಗೆ ಮಾಡುವುದು, ಫುಡ್ ಕುರಿತ ಅಪ್‍ಡೇಟ್‍ಗಳನ್ನು ನೀಡುತ್ತಿರುತ್ತಾರೆ. ಅದೇ ರೀತಿ ಮಾನವೀಯ ಗುಣಗಳನ್ನು ತೋರಿಸುವ ಕೆಲಸಗಳ ಕುರಿತು ಸಹ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಈ ಹಿಂದೆ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸಿ ಅವರ ಕುಶಲೋಪರಿ ವಿಚಾರಿಸಿದ್ದರು. ಇದೀಗ ಸ್ವತಃ ಅವರೇ ಬಡವರ ಸಹಾಯಕ್ಕೆ ನಿಂತಿದ್ದಾರೆ.