ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ (Ragini Dwivedi) ಸದ್ಯ ಕನ್ನಡ ಮತ್ತು ಪರಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಹೊಸ ಬಗೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲು ನಟಿ ಮುಂದಾಗಿದ್ದಾರೆ. ಶ್ರೀನಗರ ಕಿಟ್ಟಿಗೆ ವಿಲನ್ ಆಗಿ ರಾಗಿಣಿ ಕಾಣಿಸಿಕೊಂಡಿದ್ದಾರೆ.
‘ಸಂಜು ವೆಡ್ಸ್ ಗೀತಾ ಪಾರ್ಟ್ 2’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ಮತ್ತು ರಚಿತಾ ರಾಮ್ (Rachita Ram) ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದಲ್ಲಿ ಹೀರೋ ಶ್ರೀನಗರ ಕಿಟ್ಟಿಗೆ ರಾಗಿಣಿ ವಿಲನ್ (Villain) ಆಗಿ ಠಕ್ಕರ್ ಕೊಡಲಿದ್ದಾರೆ.
View this post on Instagram
ಹೀರೋಯಿನ್ ಆಗಿ ಗ್ಲ್ಯಾಮರ್ ಗೊಂಬೆಯಾಗಿ ಗುರುತಿಸಿಕೊಂಡಿದ್ದ ನಟಿ ರಾಗಿಣಿ, ‘ಸಂಜು ವೆಡ್ಸ್ ಗೀತಾ 2’ ಮೂಲಕ ವಿಭಿನ್ನ ಪಾತ್ರದಲ್ಲಿ ನಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚಿತ್ರದಲ್ಲಿ ರಾಗಿಣಿ ವಿಲನ್ ಎಂದು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅದಷ್ಟೇ ಅಲ್ಲ, ಚಿತ್ರದಲ್ಲಿ ಸ್ಪೆಷಲ್ ಹಾಡಿಗೂ ಕೂಡ ನಟಿ ಹೆಜ್ಜೆ ಹಾಕಿದ್ದಾರೆ.
ಇನ್ನೂ ಶ್ರೀನಗರ ಕಿಟ್ಟಿ, ರಮ್ಯಾ (Ramya) ನಟನೆಯ ‘ಸಂಜು ವೆಡ್ಸ್ ಗೀತಾ’ ಮೊದಲ ಭಾಗ ಸೂಪರ್ ಡೂಪರ್ ಹಿಟ್ ಆಗಿತ್ತು. ಹಾಗಾಗಿ ನಾಗಶೇಖರ್ ನಿರ್ದೇಶನದ ಈ ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ರಿಲೀಸ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.