ಚಿತ್ರೀಕರಣದಲ್ಲಿ ನಟಿ ರಾಗಿಣಿಗೆ ಅಪಘಾತ: ವಾರ ವಿಶ್ರಾಂತಿಗೆ ವೈದ್ಯರು ಸೂಚನೆ

Public TV
1 Min Read
ragini dwivedi

ಟಿ ರಾಗಿಣಿ ದ್ವಿವೇದಿ (Ragini Dwivedi) ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ, ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ  ‘ಮದನಿಕ’ (Madanika) ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣ (Shooting) ನಡೆಯುತ್ತಿದ್ದ ವೇಳೆ ನಟಿ  ರಾಗಿಣಿ ಅವರ ಕಾಲಿಗೆ ಪೆಟ್ಟಾಗಿದೆ. ಚಿಕಿತ್ಸೆ ನಂತರ ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ.

ragini dwivedi 4

ಈ ನಡುವೆ ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್.ಕೆ ಚಂದನ್ (Chandan) ಹಾಗೂ ರಾಗಿಣಿ ದ್ವಿವೇದಿ (Ragini Dwivedi)  ನಾಯಕ – ನಾಯಕಿಯಾಗಿ ನಟಿಸಿರುವ ‘ಬಿಂಗೊ’ (Bingo) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.

Ragini Dwivedi 3

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಆರ್ ಕೆ ಚಂದನ್ ,  ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ragini dwivedi 1

ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

 

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ ಬಿಂಗೊ ಚಿತ್ರಕ್ಕಿದೆ.

Share This Article