ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮೈಸೂರು ಕೋರ್ಟ್ ಗೆ (Court) ಹಾಜರಾದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ನನ್ನ ಪತಿಯನ್ನು (Adil) ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋರ್ಟ್ ಅವರಿಗೆ ಏಳು ದಿನ ಪೊಲೀಸ್ ಕಸ್ಟಡಿ ಕೊಟ್ಟಿದೆ. ನಾನು ನ್ಯಾಯಾಧೀಶರ ಮುಂದೆ ಹಾಜರಾಗಲು ಬಂದಿದ್ದೇನೆ. ನನಗೆ ನ್ಯಾಯ ಬೇಕು, ಆತನಿಗೆ ಜಾಮೀನು ಯಾವುದೇ ಕಾರಣಕ್ಕೂ ಸಿಗಬಾರದು’ ಎಂದರು.
ಮುಂದುವರೆದು ಮಾತನಾಡಿದ ರಾಖಿ, ‘ಆತ ಕಾನೂನು ಬದ್ಧವಾಗಿ ಮದುವೆಯಾಗಿದ್ದಾನೆ. ಅದರ ಎಲ್ಲಾ ದಾಖಲಾತಿ ನನ್ನ ಬಳಿ ಇದೆ. ನಾನು ಇಂದು ಬೆಳಿಗ್ಗೆ ಆದಿಲ್ ಖಾನ್ ತಂದೆ ಜೊತೆ ಮಾತನಾಡಿದೆ. ನಾನು ಹಿಂದೂ ಎಂಬ ಕಾರಣಕ್ಕೆ ಅವರು ಸ್ವೀಕಾರ ಮಾಡುತ್ತಿಲ್ಲ. ಹಾಗಾದ್ರೆ ನಾನು ಏನು ಮಾಡಲಿ. ನನ್ನ ಬಳಿ 1.65 ಕೋಟಿ ಹಣ ಪಡೆದಿದ್ದಾನೆ. ಆದರೆ ನನಗೆ ಒಂದು ಪೈಸೆ ಕೊಟ್ಟಿಲ್ಲ’ ಎಂದು ಆರೋಪ ಮಾಡಿದರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್
‘ಆದಿಲ್ ಮೈಸೂರು ಜನ ಸರಿ ಇಲ್ಲ ಎಂದು ನನ್ನ ಬಳಿ ಹೇಳಿದ. ಇದಕ್ಕಾಗಿಯೇ ಮುಂಬೈಗೆ ಬರುತ್ತೇನೆ ಎಂದು ಹೇಳಿದ್ದ. ಆ ನಂತರ ಮುಂಬೈನಲ್ಲಿ ಸಾಕಷ್ಟು ಬಾರಿ ನನ್ನ ಮೇಲೆ ಹಲ್ಲೆ ಮಾಡಿದ್ದ. ಮೈಸೂರು ಕೋರ್ಟ್ ಮೇಲೆ ವಿಶ್ವಾಸ ಇದೆ. ನನಗೆ ನ್ಯಾಯ ಕೊಡಿಸಿ’ ಎಂದು ಮಾಧ್ಯಮಗಳ ಮುಂದೆ ರಾಖಿ ಗಳಗಳನೆ ಅತ್ತರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k