ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ತಾಯಿ ಜಯಾ ಸಾವಂತ್ (Jaya Sawant) ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ (Death). ಕ್ಯಾನ್ಸರ್ (Cancer) ಮತ್ತು ಬ್ರೇನ್ ಟ್ಯೂಮರ್ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಬಹು ಅಂಗಾಂಗ ವೈಫಲ್ಯದಿಂದಲೂ ಬಳಲುತ್ತಿದ್ದ ಕಾರಣದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ತಾಯಿಯ ಕೊನೆಯ ಕ್ಷಣಗಳನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ರಾಖಿ, ತಾಯಿಯ ಎದುರು ಕುಳಿತು ದುಃಖಿಸಿದ್ದಾರೆ.
Advertisement
ಕೆಲ ದಿನಗಳ ಹಿಂದೆಯಷ್ಟೇ ರಾಖಿ ಸಾವಂತ್ ತಮ್ಮ ತಾಯಿಗೆ ಇರುವ ಖಾಯಿಲೆ ಕುರಿತು ಮಾತನಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡು, ತಾಯಿ ಬ್ರೇನ್ ಟ್ಯೂಮರ್ ನಿಂದ ಬಳಲುತ್ತಿರುವ ಕುರಿತು ಹೇಳಿಕೊಂಡಿದ್ದರು. ಎಡದೇಹಕ್ಕೆ ಪ್ಯಾರಾಲೈಸ್ ಆಗಿರುವ ಕುರಿತು ಮಾಹಿತಿ ಹಂಚಿಕೊಂಡು, ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿರಿ ಎಂದು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ನಟ ನಂದಮೂರಿ ತಾರಕರತ್ನ ಸ್ಥಿತಿ ಗಂಭೀರ : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಭೇಟಿ
Advertisement
Advertisement
ರಾಖಿ ತಾಯಿ 2021ರಿಂದಲೇ ಬ್ರೇನ್ ಟ್ಯೂಮರ್ ನಿಂದ ಬಳಲುತ್ತಿದ್ದಾರೆ. 2021ರ ಏಪ್ರಿಲ್‌ನಲ್ಲಿ ಅದಕ್ಕಾಗಿ ಶಸ್ತ್ರಚಿಕಿತ್ಸೆ ಕೂಡ ನಡೆಸಲಾಗಿತ್ತು. ಈ ಸರ್ಜರಿಗೆ ಸಲ್ಮಾನ್ ಖಾನ್ ಧನ ಸಹಾಯ ಮಾಡಿದ್ದರು ಎಂದು ಸ್ವತಃ ರಾಖಿಯೇ ಹೇಳಿಕೊಂಡಿದ್ದರು. ಸಂಕಷ್ಟದ ಸಮಯದಲ್ಲಿ ಸಹಾಯ ಹಸ್ತ ಚಾಚಿದ ಸಲ್ಮಾನ್ ಖಾನ್ ಗೆ ರಾಖಿ ಸಾವಂತ್ ಧನ್ಯವಾದ ತಿಳಿಸಿದ್ದರು. ಕೊನೆಗೂ ಯಾವುದೂ ಅವರ ತಾಯಿಯನ್ನು ಕೈ ಹಿಡಿಯಲಿಲ್ಲ. ನಿನ್ನೆ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k