ಪುನೀತ್ ರಾಜ್‌ಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ‘ಅಪ್ಪು’ (Appu) ಸಿನಿಮಾ ರಿ-ರಿಲೀಸ್ ಆಗಿದೆ. ಈ ಹಿನ್ನೆಲೆ ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ‘ಅಪ್ಪು’ ಚಿತ್ರವನ್ನು ರಕ್ಷಿತಾ (Rakshita) ವೀಕ್ಷಿಸಿದ್ದಾರೆ. ಇದನ್ನೂ ಓದಿ:ಮಾ.17ಕ್ಕೆ ಪುನೀತ್ ಹುಟ್ಟುಹಬ್ಬ – ‘ಅಪ್ಪು’ ಸಿನಿಮಾ ರೀ-ರಿಲೀಸ್
ಇದೇ ಮಾ.17ರಂದು ಪುನೀತ್ ಹುಟ್ಟುಹಬ್ಬವಾಗಿದ್ದು, ಮೂರು ದಿನ ಮುಂಚಿತವಾಗಿ ‘ಅಪ್ಪು’ ಚಿತ್ರ ಮರು ಬಿಡುಗಡೆ ಆಗಿದೆ. ಅಭಿಮಾನಿಗಳೊಂದಿಗೆ ರಕ್ಷಿತಾ ‘ಅಪ್ಪು’ ಚಿತ್ರ ನೋಡಿ ರಂಜಿಸಿದ್ದಾರೆ. ಈ ವೇಳೆ, ಅರಸು, ಆಕಾಶ್ ಚಿತ್ರಗಳ ನಿರ್ದೇಶಕ ಮಹೇಶ್ ಬಾಬು ಕೂಡ ಸಾಥ್ ನೀಡಿದ್ದಾರೆ.
‘ಬಿಗ್ ಬಾಸ್’ ಸ್ಪರ್ಧಿಗಳಾದ ಕಿಶನ್, ರಕ್ಷಕ್ ಬುಲೆಟ್, ಕಾರ್ತಿಕ್ ಮಹೇಶ್ (Karthik Mahesh), ನಮ್ರತಾ ಗೌಡ (Namratha Gowda) ಕೂಡ ‘ಅಪ್ಪು’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಮತ್ತೊಮ್ಮೆ ಪುನೀತ್ ಸಿನಿಮಾ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅಪ್ಪು ಎಂಟ್ರಿಗೆ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಎಂಜಾಯ್ ಮಾಡಿದ್ದಾರೆ.
ಇನ್ನೂ ಪುರಿ ಜಗನ್ನಾಥ್ ನಿರ್ದೇಶನದ ‘ಅಪ್ಪು’ ಸಿನಿಮಾದಲ್ಲಿ ಪುನೀತ್‌ಗೆ ನಾಯಕಿಯಾಗಿ ರಕ್ಷಿತಾ ನಟಿಸಿದ್ದರು. ಪಾರ್ವತಮ್ಮ ರಾಜ್‌ಕುಮಾರ್ ನಿರ್ಮಾಣ ಮಾಡಿದ್ದರು. 2002ರಲ್ಲಿ ಈ ಸಿನಿಮಾದ ಮೂಲಕ ಪುನೀತ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.